ತಿಪಟೂರು: ಬೈಕ್ ಮೇಲೆ ಜಲ್ಲಿ ತುಂಬಿದ ಕ್ರಷರ್ ಲಾರಿ ಹರಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವನಿಗೆ ಗಂಭೀರವಾಗಿ ಗಾಯವಾದ ಘಟನೆ ಹುಚ್ಚನಟ್ಟಿ ಅಂಡರ್ ಪಾಸ್ ಬಳಿ ನಡೆದಿದೆ.
ಹಳೇಪಾಳ್ಯದ ಪರಿಶಿಷ್ಟ ಜಾತಿ ಕಾಲೋನಿಯ 24 ವರ್ಷ ವಯಸ್ಸಿನ ರಂಗಸ್ವಾಮಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ರಂಗಸ್ವಾಮಿ ಅವರು ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ.
ರಂಗಸ್ವಾಮಿ ಅವರು ಬೈಕ್ ನಲ್ಲಿ ಹಸುವಿಗೆ ಮೇವು ಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕ್ರಷರ್ ಲಾರಿ ಬೈಕ್ ಸವಾರನ ಮೇಲೆಯೇ ಹರಿದಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಂಡರ್ ಪಾಸ್ ನಲ್ಲಿ ಯಾವುದೇ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಅಂಡರ್ ಪಾಸ್ ರಸ್ತೆಗೆ ಕನಿಷ್ಟ ಹಂಪ್ ಗಳು ಕೂಡ ಮಾಡದೇ ಹಾಗೆಯೇ ಬಿಡಲಾಗಿದ್ದು, ವಾಹನಗಳು ಅಡ್ಡದಿಡ್ಡಿಯಾಗಿ ಚಲಿಸುತ್ತಿವೆ. ಇದೀಗ ಪ್ರಾಣವೊಂದು ಬಲಿಯಾಗಿದೆ. ನಿರ್ಲಕ್ಷ್ಯವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂಬ ಒತ್ತಾಯಗಳು ಘಟನೆಯ ಬೆನ್ನಲ್ಲೇ ಕೇಳಿ ಬಂದಿವೆ.
ವರದಿ: ಆನಂದ, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz