ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಂಟಾಗಿರುವ ಹಾನಿಗಳ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯಗಳಿಗೆ ರಸ್ತೆಗಳ ದುರಸ್ತಿಗೆ ಲೋಕೋಪಯೋಗಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ಬಸವರಾಜ ಬೊಮ್ಮಾಯಿ ಅವರು ತಕ್ಷಣವೇ 500 ಕೋಟಿ ರೂ. ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಆದೇಶ ನೀಡಿದ್ದಾರೆ.
ಮಳೆಯಿಂದಾದ ಹಾನಿಗಳು:
ಜೀವ ಹಾನಿ; 24, ಸಂಪೂರ್ಣ ಮನೆ ಹಾನಿ; 658, ಭಾಗಶಃ ಮನೆ ಹಾನಿ; 8,495, ಜಾನುವಾರು ಸಾವು; 191, ಕೃಷಿ ಬೆಳೆ ಹಾನಿ; 5 ಲಕ್ಷ ಹೆಕ್ಟೇರ್, ತೋಟಗಾರಿಕೆ ಬೆಳೆ; 30,114 ಹೆಕ್ಟೇರ್, ರಸ್ತೆ ಹಾನಿ; 2,203 ಕಿ.ಮೀ., ಸೇತುವೆಗಳು; 165, ಶಾಲೆಗಳು; 1,225, ಪ್ರಾಥಮಿಕ ಆರೋಗ್ಯ ಕೇಂದ್ರ; 39, ವಿದ್ಯುತ್ ಕಂಬ; 1,674, ವಿದ್ಯುತ್ ಟ್ರಾನ್ಸ್ ಫಾರ್ಮರ್; 278
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ಹಾನಿ ಪರಿಹಾರ ಕಾರ್ಯಕ್ಕೆ ಪ್ರತಿವಲಯಕ್ಕೆ ರೂ.25 ಲಕ್ಷ ಬಿಡುಗಡೆ ಮಾಡಲಾಗಿದೆ. ರಸ್ತೆ ಗುಂಡಿ ಮುಚ್ಚಲು ವಸ್ತುಸ್ಥಿತಿ ಆಧಾರಿತ ವರದಿ ಸಲ್ಲಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಅಪಾಯಕಾರಿ ರಸ್ತೆ ಗುಂಡಿಗಳ ಬಳಿ ಬ್ಯಾರಿಕೇಡ್ ಹಾಗೂ ಲೈಟಿಂಗ್ ವ್ಯವಸ್ಥೆ ಮಾಡಿ, ದುರಸ್ತಿಗೆ ಕ್ರಮ ವಹಿಸಬೇಕು. ಮಳೆ ಹಾನಿ ಸಂಭವಿಸಿದ ಕುರಿತು ವಾರ್ಡ್‌ವಾರು ವರದಿ ಸಲ್ಲಿಸಬೇಕು ಎಂದು ಇದೇ ವೇಳೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.