ರಸ್ತೆ ದಾಟುತ್ತಿದ್ದ ಚಿರತೆಯೊಂದಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಚಿರತೆ ಬಾನೆಟ್ ಅಡಿ ಸಿಲುಕಿಕೊಂಡು ಪ್ರಾಣ ಉಳಿಸಿಕೊಳ್ಳಲು ಪರದಾಡಿರುವ ವಿಡಿಯೋ ವೈರಲ್ ಆಗಿದೆ.
ಬಾನೆಟ್ ಅಡಿ ಸಿಲುಕಿಕೊಂಡ ಚಿರತೆ ಸ್ಥಳದಿಂದ ಓಡಲು ಸಾಕಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ, ಈ ವೇಳೆ ಕಾರು ಚಾಲಕ ವಾಹನವನ್ನು ರಿವರ್ಸ್ ತೆಗೆದಿದ್ದು, ಈ ವೇಳೆ ಚಿರತೆ ಬಾನೆಟ್ ಅಡಿಯಿಂದ ಬಿಡುಗಡೆಗೊಂಡಿದ್ದು, ತಕ್ಷಣವೇ ಚಿರತೆ ಅಲ್ಲಿಂದ ಓಡಿದೆ.
ಈ ವಿಡಿಯೋವನ್ನು ಐಎಫ್ ಎಸ್ ಅಧಿಕಾರಿ ಸುಸಾಂತ ನಂದಾ, ಚಿತ್ರನಟಿ ರವೀನಾ ಟಂಡನ್ ಸೇರಿದಂತೆ ಹಲವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ಈ ಘಟನೆ ಎಲ್ಲಿ ಮತ್ತು ಯಾವಾಗ ನಡೆದಿದೆ ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲವಾಗಿದ್ದು, ಪಕ್ಕದ ಕಾರಿನಲ್ಲಿದ್ದವರು ಮೊಬೈಲ್ ನಲ್ಲಿ ಈ ದೃಶ್ಯ ಸೆರೆಹಿಡಿದು ಹರಿಬಿಟ್ಟಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz