ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಕೆಇಬಿ ಕಚೇರಿ ಮುಂಭಾಗ ದೊಡ್ಡ ಆಲದಮರ ಬಿದ್ದು, ಹುಳಿಯಾರು – ತಿಪಟೂರು ರಸ್ತೆ ಮಾರ್ಗ ಸಂಪೂರ್ಣವಾಗಿ ಬಂದ್ ಆಗಿದ್ದು, ಪರಿಣಾಮವಾಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.
ವಿದ್ಯುತ್ ತಂತಿಯ ಮೇಲೆಯೇ ಮರ ಬಿದ್ದ ಪರಿಣಾಮ ರಸ್ತೆ ಬಂದ್ ಆಗಿರುವುದಲ್ಲದೇ ಈ ಪ್ರದೇಶದಲ್ಲಿ ವಿದ್ಯುತ್ ಕಡಿತಗೊಂಡಿದೆ. ರಸ್ತೆ ಬಂದ್ ಆದ ಹಿನ್ನೆಲೆಯಲ್ಲಿ ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು.
ಈ ಮಾರ್ಗದ ಬದಿಯಲ್ಲಿ ಹಳೆಯ ಕಾಲದ ಸಾಕಷ್ಟು ಮರಗಳಿದ್ದು, ಗಾಳಿ, ಮಳೆಗಳ ಸಂದರ್ಭದಲ್ಲಿ ರಸ್ತೆಗೆ ಬೀಳುತ್ತಿವೆ. ಪದೇ ಪದೇ ಇಂತಹ ಘಟನೆಗಳು ಇಲ್ಲಿ ನಡೆಯುತ್ತಲೇ ಇರುತ್ತವೆ. ಸಂಬಂಧ ಪಟ್ಟವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಚಲಿಸುತ್ತಿರುವ ವಾಹನಗಳ ಮೇಲೆ ಮರಗಳು ಉರುಳಿ ಬಿದ್ದು, ಸಾವು ನೋವು ಸಂಭವಿಸುವ ಮೊದಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಬದಿಯಲ್ಲಿ ಅಪಾಯಕಾರಿಯಾಗಿರುವ ಮರಗಳ ತೆರವಿಗೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5