ಜಾಗತಿಕ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ರಸ್ತೆ ಗುಂಡಿಗಳಿಗೆ ರಾಜ್ಯ ಸರಕಾರ ಹಾಗೂ ಬಿಬಿಎಂಪಿ ಮುಕ್ತಿ ನೀಡದೇ ಇರುವುದರಿಂದ ವಾಹನಗಳ ಸಂಚಾರ ವೇಗದಲ್ಲಿ ಕುಸಿತ ಕಂಡು ಬಂದಿದೆ.
ಸಂಚಾರಿ ವಿಭಾಗದ ವಿಶೇಷ ಕಮಿಷನರ್ ಆಗಿ ಇತ್ತೀಚೆಗೆ ನೇಮಕಗೊಂಡ ಡಾ.ಎಂ.ಎ.ಸಲೀಂ ಮಾತನಾಡಿ, ಕಳೆದ 10 ದಿನಗಳಲ್ಲಿ ವಾಹನಗಳ ಸಂಚಾರ ವೇಗ ಶೇ.50ರಷ್ಟು ಕುಸಿದಿದೆ. ನಗರದಲ್ಲಿ ವಾಹನ ದಟ್ಟಣೆ ಹೆಚ್ಚಿರುವ ಸಮಯದಲ್ಲಿ ಲಘು ವಾಹನಗಳು ನಗರ ಪ್ರವೇಶಿಸಿದಂತೆ ನಿರ್ಬಂಧ ವಿಧಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಲಘು ಹಾಗೂ ಗೂಡ್ಸ್ ವಾಹನಗಳ ಸಂಚಾರದಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಅಲ್ಲದೇ ರಸ್ತೆ ಗುಂಡಿಗಳ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕಬೇಕು. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಅವರು ಸೂಚಿಸಿದ್ದಾರೆ.
ನಗರದಲ್ಲಿ ಅತೀ ಹೆಚ್ಚು ಸಂಚಾರ ದಟ್ಟಣೆ ಇರುವ 9 ಕಾರಿಡಾರ್ ರಸ್ತೆಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಸುಗಮ ಸಂಚಾರದ ಕಡೆ ಗಮನ ಹರಿಸಲಾಗುತ್ತಿದೆ. ಇದರಲ್ಲಿ ಸಿಲ್ಕ್ ಬೋರ್ಡ್, ಗೊರಗುಂಟೆಪಾಳ್ಯ ಅತೀ ಹೆಚ್ಚು ಗಮನ ಹರಿಸಲಾಗುತ್ತಿದೆ.
ಈ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವ ಜೊತೆಗೆ ವಿವಿಧ ಕಾಮಗಾರಿಗಳು ನಡೆಯುತ್ತಿರುವುದರಿಂದ ಸಮಸ್ಯೆ ಹೆಚ್ಚಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


