ಹೆಚ್.ಡಿ.ಕೋಟೆ: ನಿಗದಿತ ಸಮಯಕ್ಕೆ ಬಸ್ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳು ತಾಲ್ಲೂಕಿನ ಮಾದಪುರ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಹೆಚ್.ಡಿ.ಕೋಟೆ ಹಾಗೂ ಮೈಸೂರಿಗೆ ಮುಖ್ಯರಸ್ತೆಯಲ್ಲಿರುವ ಮಾದಪುರ ಗ್ರಾಮ ಒಂದು ಕೇಂದ್ರಸ್ಥಾನವಾಗಿದೆ. ಮಾದಪುರ ಗ್ರಾಮಕ್ಕೆ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳಿಂದ ವಿದ್ಯಾರ್ಥಿಗಳು ಬಂದು ಅಲ್ಲಿಂದ ಮೈಸೂರು ಮತ್ತು ಹೆಚ್.ಡಿ.ಕೋಟೆಗೆ ವ್ಯಾಸಂಗ ಮಾಡಲು ವಿದ್ಯಾರ್ಥಿಗಳು ತೆರಳುತ್ತಾರೆ. ಆದರೆ, ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ಕೆ ಎಸ್ ಆರ್ ಟಿ ಸಿ ಸರಿಯಾದ ಸಾರಿಗೆಯ ವ್ಯವಸ್ಥೆ ಕಲ್ಪಿಸುತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸರ್ಕಾರ ಮತ್ತು ಶಾಸಕರ ವಿರುದ್ಧ ಧಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


