ಪ್ರಸಿದ್ದ ದೇವಸ್ಥಾನವೊಂದರಲ್ಲಿ ಬೃಹತ್ ರಥ ಉರುಳಿಬಿದ್ದು ಇಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಸಿ.ಮನೋಹರನ್ (57) ಮತ್ತು ಜಿ ಸರವಣನ್ (50) ಸಾವನ್ನಪ್ಪಿದ್ದಾರೆ.
ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ವೈಕಾಶಿ ಹಬ್ಬದ ಅಂಗವಾಗಿ ಕಾಳಿಯಮ್ಮನ ದೇವಸ್ಥಾನದ 30 ಅಡಿ ಅಲಂಕೃತ ರಥ ದೇವಾಲಯದ ಸುತ್ತಮುತ್ತಲಿನ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಿದ್ದಾಗ ರಥವು ಇದ್ದಕ್ಕಿದ್ದಂತೆ ಉರುಳಿಬಿದ್ದಿದೆ. ಪರಿಣಾಮ ರಥದ ಮರದ ಚಕ್ರದಡಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ.
ಮೂವರು ಗಾಯಗೊಂಡಿದ್ದಾರೆ. ಕೂಡಲೇ ರಥ ಎಳೆಯುತ್ತಿದ್ದ ಭಕ್ತರು ಹಾಗೂ ಮೆರವಣಿಗೆ ವೀಕ್ಷಿಸುತ್ತಿದ್ದವರು ರಥದಡಿ ಸಿಲುಕಿದ್ದ ಇನ್ನುಳಿದವರ ರಕ್ಷಣೆಗೆ ಧಾವಿಸಿ ಮೂವರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಅವರನ್ನು ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB