ಹುಬ್ಬಳ್ಳಿ: ಆರ್ಥಿಕವಾಗಿ ದಿವಾಳಿಯಾಗಿದ್ದರಿಂದ ರಾಜ್ಯ ಸರ್ಕಾರ ಪಡಿತರ ಚೀಟಿಗಳನ್ನು ಕಡಿತ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಆರೋಪಿಸಿದ್ದಾರೆ.
ರಾಜ್ಯದ ಆಹಾರ ಮತ್ತು ನಾಗರಿಕ ಸಚಿವ ಕೆ.ಎಚ್.ಮುನಿಯಪ್ಪ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಕೇಂದ್ರ ಸರ್ಕಾರ ಪ್ರತಿಯೊಬ್ಬ ಅರ್ಹ ಪಡಿತರದಾರನಿಗೆ 5 ಕೆ.ಜಿ.ಯಷ್ಟು ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಇಷ್ಟಾದರು ಪಡಿತರ ಚೀಟಿ ಕಡಿತ ಯಾಕೆ ಮಾಡುತ್ತಿದ್ದಾರೆ ಇದರಿಂದ ಬಡವರಿಗೆ ತೊಂದರೆ ಆಗುತ್ತದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಗೋಧಿ, ಭತ್ತ ಇನ್ನಿತರ ಕೃಷಿ ಉತ್ಪನ್ನಗಳನ್ನು ಖರೀದಿಸಲಾಗುತ್ತದೆ. ಮುಂದಾಲೋಚನೆ, ಯೋಜನಾ ಬದ್ದವಿಲ್ಲದ ಗ್ಯಾರಂಟಿಗಳ ಜಾರಿಯೇ ಇದಕ್ಕೆಲ್ಲ ಕಾರಣವಾಗಿದೆ ಎಂದರು.
ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆಯುತ್ತೇವೆ ಎನ್ನುತ್ತಾರೆ. ಆದರೆ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ ಎಂದು ಆರೋಪಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q