ಬೆಳಗಾವಿ: ಶಿವಸೇನೆಯ ಸಂಸದ ಧೈರ್ಯಶೀಲ್ ಮಾನೆ ಅವರಿಗೆ ಕರ್ನಾಟಕದ ಗಡಿ ಪ್ರವೇಶಿಸಿ ಬೆಳಗಾವಿಗೆ ಬರದಂತೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ರಾತ್ರೋರಾತ್ರಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶಾಕ್ ನೀಡಿದ್ದಾರೆ.
ಇಂದು ನಗರದಲ್ಲಿ ಎಂಇಎಸ್ ಕಾರ್ಯಕರ್ತರು ಹುತಾತ್ಮರ ದಿನ ಆಚರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಹಾರಾಷ್ಟ್ರದ ಗಡಿ ಸಮನ್ವಯ ಸಮಿತಿ ಅಧ್ಯಕ್ಷ ಆಗಿರುವ ಧೈರ್ಯಶೀಲ್ ಮಾನೆ ಆಗಮಿಸಲಿದ್ದರು.
ಮಾನೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇ ಆದಲ್ಲಿ ಪರಿಸ್ಥಿತಿ ಹದಗೆಡಬಹುದು. ಪ್ರಚೋದನಾತ್ಮಕ ಭಾಷಣ ಮಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ವಿಶೇಷ ಅಧಿಕಾರ ಬಳಸಿ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಗಡಿ ವಿವಾದ ಸಂಬಂಧ ಉದ್ರೇಕಕಾರಿ ಹೇಳಿಕೆಗಳಿಂದ ಭಾಷಾ ಸಮಸ್ಯೆ ಉದ್ಭವವಾಗಬಹುದು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗುವ ಸಾಧ್ಯತೆ ಹೆಚ್ಚು. ಹೀಗಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


