ಗುಬ್ಬಿ: ತಾಲ್ಲೂಕಿನ ಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಲ್.ರವಿಕುಮಾರ್ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಆರೋಪ ಬಗ್ಗೆ ಸ್ಪಷ್ಟಿಕರಣ ನೀಡಿದರು.
ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿರುವ ದಲಿತ ಸಮುದಾಯದ ಕೆ.ಎಲ್.ರವಿಕುಮಾರ್ ಅವರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಂತರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಗ್ರಾಮ ಅಭಿವೃದ್ಧಿ ಹೆಚ್ಚು ಒತ್ತು ನೀಡುತ್ತಿದ್ದಾರೆ. ಇದನ್ನು ಸಹಿಸದೇ ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜ್, ಶಿವನಂದಯ್ಯ, ಸಿದ್ದರಾಜು ಇತರರು ಉದ್ದೇಶ ಪೂರ್ವಕವಾಗಿ ಪಂಚಾಯಿತಿ ಮುಂಭಾಗದಲ್ಲಿ ಅಂಗಡಿ ಮಳಿಗೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ಸಹಿಸಲಾಗದೇ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ ಈ ಆರೋಪದಲ್ಲಿ ಹುರುಳಿಲ್ಲ ಎಂದರು.
ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ ಮಾತನಾಡಿ, ಗ್ರಾಮ ಪಂಚಾಯಿತಿ ಗೆ ಒಳಪಡುವ ಮಾಂಸದ ಅಂಗಡಿ ಶಿಧಿಲವಾಗಿದ್ದು ಪರ್ಯಾಯವಾಗಿ ಅಂಗಡಿ ಮಳಿಗೆ ತೆರವು ಮಾಡಿಸಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಗ್ರಾಮ ಪಂಚಾಯಿತಿ ಆದಾಯ ಮೂಲ ಹೆಚ್ಚಿಸುವ ಸಲುವಾಗಿ ಅಂಗಡಿ ಮಳಿಗೆ ನಿರ್ಮಾಣಮಾಡಲು ಗ್ರಾಮ ಪಂಚಾಯಿತಿ ಆಡಳಿತದ ಸಭೆಯಲ್ಲಿ ತಿರ್ಮಾನಿಸಿ ಎಲ್ಲಾ ಸದಸ್ಯರ ಅನುಮತಿ ಪಡೆದು ಗ್ರಾಮ ಪಂಚಾಯಿತಿ ಆವರಣದಲ್ಲಿ ಮೇಕೆ ಶೇಡ್ ತೆರವುಗೊಳಿಸಿ ತೆರವುಗೊಳಿಸಿ ಆ ಸ್ಥಳದಲ್ಲಿ ಅಂಗಡಿ ಮಳಿಗೆ ಪ್ರಾರಂಭ ಮಾಡುವುದನ್ನು ಸಹಿಸದೇ ಈ ಆರೋಪ ಮಾಡುತ್ತಿದ್ದಾರೆ ಇದು ಸರಿಯಲ್ಲ ಎಂದರು.
ಅಭಿವೃದ್ಧಿ ಸಹಿಸದ ಕೆಲವು ಸದಸ್ಯರು ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಕಲ್ಲೂರು ಗ್ರಾಮಕ್ಕೆ ಐ ಮಾಸ್ಕ್ ದೀಪ, ಪಂಚಾಯಿತಿ ಸಭಾಂಗಣ, ಸಂತೇ ಮೈದಾನ ಅಭಿವೃದ್ಧಿ, ಗ್ರಾಮಗಳ ಸ್ವಚ್ಛತೆ ನಿರ್ವಹಣೆ. ಪಾರ್ಕ್ ನಿರ್ಮಾಣ, ಹೀಗೆ ಹಲವು ಅಭಿವೃದ್ಧಿ ಕಾಮಗಾರಿ ಮಾಡುವುದನ್ನು ಸಹಿಸಲಾಗದೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ. ಹೀಗೆ ಅಭಿವೃದ್ಧಿ ವಿಚಾರದಲ್ಲಿ ಪಂಚಾಯಿತಿ ಅಧ್ಯಕ್ಷರ ಮೇಲೆ ಆರೋಪ ಮಾಡುವುದು ಮುಂದುವರೆದರೆ ದಲಿತ ಸಂಘರ್ಷ ಸಮಿತಿ ವತಿಯಿಂದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡರಾದ ಕುಂದರನಹಳ್ಳಿ ನಟರಾಜ್, ನರಸೀಯಪ್ಪ, ದೊಡ್ಡಯ್ಯ, ಅದಲಗೆರೆ ಈಶ್ವರಯ್ಯ, ಲಕ್ಕೇನಹಳ್ಳಿ ಶಿವರಂಗಯ್ಯ, ರಾಜಪ್ಪ, ಕೆ.ಕಡಬ ಶಂಕರ್, ಮಹಾದೇವಯ್ಯ, ಲೋಕೇಶ್ ಇತರ ಮುಖಂಡರು ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy