ಬೆಳಗಾವಿ ಉತ್ತರ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಡಾ.ರವಿ ಪಾಟೀಲ್ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸದಾಶಿವನಗರ, ಅಂಬೇಡ್ಕರ್ ನಗರ, ಶಾಹೂನಗರ, ಬಿ.ಕೆ.ಕಂಗ್ರಾಳಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಸೋಮವಾರ ಬಿರುಸಿನ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಮಹಿಳೆಯರು ರವಿ ಪಾಟೀಲರಿಗೆ ಆರತಿ ಬೆಳಗಿ ಸ್ವಾಗತಿಸಿ, ಜಯವಾಗಲಿ ಎಂದು ಹಾರೈಸಿದರು. ಪ್ರತಿ ಮನೆಯನ್ನು ಸಂಪರ್ಕಿಸುವ ಮೂಲಕ ಬೆಳಗಾವಿಯ ಅಭಿವೃದ್ಧಿಗೆ ನಮ್ಮನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.
ವಿಶೇಷವೆಂದರೆ ಈ ಸಂದರ್ಭದಲ್ಲಿ ಮಹಿಳೆಯರು ರವಿ ಪಾಟೀಲರಿಗೆ ಆರತಿ ಬೆಳಗಿ, ಸ್ವಾಗತಿಸಿ ಜಯವಾಗಲಿ ಎಂದು ಹಾರೈಸಿದರು. ಅವರ ಪತ್ನಿ ಸುನೀತಾ ಪಾಟೀಲ್ ಅವರಿಗೂ ಮಹಿಳೆಯರು ಅರಿಶಿನ ಮತ್ತು ಕುಂಕುಮ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯಕರ್ತರು ರವಿ ಪಾಟೀಲ್ ಪರ ಘೋಷಣೆಗಳನ್ನು ಕೂಗಿದರು. ಅಲ್ಲದೇ ಬೀದಿ ಬದಿ ವ್ಯಾಪಾರಿಗಳ ಬಳಿಗೆ ತೆರಳಿದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ್ ಸರ್ಕಾರದ ಯೋಜನೆಗಳನ್ನು ತಿಳಿಸಿ ಬಿಜೆಪಿಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


