nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಯಚೂರು ಬಳಿ ಡ್ರಗ್ಸ್ ಪಾರ್ಕ್: ಸಚಿವ ಮುರುಗೇಶ್ ನಿರಾಣಿ
    ರಾಜ್ಯ ಸುದ್ದಿ June 24, 2022

    ರಾಯಚೂರು ಬಳಿ ಡ್ರಗ್ಸ್ ಪಾರ್ಕ್: ಸಚಿವ ಮುರುಗೇಶ್ ನಿರಾಣಿ

    By adminJune 24, 2022No Comments2 Mins Read
    murgesh nirani

    ರಾಜ್ಯದಲ್ಲಿ ಮತ್ತಷ್ಟು ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ಸೃಷ್ಠಿಸುವ ಸಲುವಾಗಿ ಮುಂಬರುವ ನವೆಂಬರ್ ತಿಂಗಳಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

    ನವೆಂಬರ್ 2, 3 ಮತ್ತು 4ರಂದು ಮೂರು ದಿನಗಳ ಅರಮನೆ ಮೈದಾನದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು.

    ನಗರದಲ್ಲಿ ಹೊರವಲಯದ ಗಂಗಾಧರಯ್ಯ ಮೆಮೋರಿಯಲ್ ಹಾಲ್‌ ನಲ್ಲಿ ಏರ್ಪಡಿಸಲಾಗಿರುವ ಉದ್ಯಮಿಯಾಗು ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2010 ಮತ್ತು 2012ರಲ್ಲಿ ಆಯೋಜಿಸಿದ್ದ ವಿಶ್ವ ಹೂಡಿಕೆದಾರರ ಸಮಾವೇಶ ಬಹಳ ಯಶಸ್ವಿಯಾಗಿತ್ತು. ಇದರಿಂದ 15 ಲಕ್ಷ ಜನರಿಗೆ ಉದ್ಯೋಗಾವಕಾಶ ದೊರೆತ್ತಿತ್ತು. ಹಾಗಾಗಿಯೇ ಮತ್ತೆ ನವೆಂಬರ್‌ನಲ್ಲೂ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗುತ್ತಿದೆ ಎಂದರು.

    ಕರ್ನಾಟಕ ರಾಜ್ಯ ಕೈಗಾರಿಕೆಯಲ್ಲಿ ಹಾಗೂ ಬಂಡವಾಳ ಆಕರ್ಷಿಸುವಲ್ಲಿ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ. ನಾವು ಮಕ್ಕಳನ್ನು ಬರೀ ಪದವೀಧರರನ್ನಾಗಿ ಮಾಡಿದರೆ ಸಾಲದು, ಅವರನ್ನು ಉದ್ಯಮಿಗಳನ್ನಾಗಿ ಮಾಡಬೇಕು. ಜತೆಗೆ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಕೆಲಸ ಸಹ ಆಗಬೇಕು ಎಂದು ಅವರು ತಿಳಿಸಿದರು.

    ಜಿಲ್ಲಾವಾರು ದೊರೆಯುವ ಕಚ್ಚಾವಸ್ತುಗಳ ಬಳಸಿಕೊಂಡು ಜಿಲ್ಲಾ ಮಟ್ಟದಲ್ಲಿ ಯಾವ ಕೈಗಾರಿಕೆ ಸ್ಥಾಪನೆ ಸೂಕ್ತ ಎಂಬ ಬಗ್ಗೆ ಹಾಗೂ ಸರ್ಕಾರದಿಂದ ಕೈಗಾರಿಕೆಗಳ ಸ್ಥಾಪನೆಗೆ ದೊರೆಯುವ ಸವಲತ್ತುಗಳ ಬಗ್ಗೆ ತಿಳಿಸುವ ಕೆಲಸವನ್ನು ಈ ಕೈಗಾರಿಕಾ ಅದಲಾತ್ ಮೂಲಕ ಮಾಡಲಾಗುತ್ತಿದೆ ಎಂದರು.

    ಛಲ ಇರುವವರು ಏನೆಲ್ಲಾ ಸಾಧಿಸುತ್ತಾರೆ ಎನ್ನುವುದನ್ನು ಹೇಳಿಕೊಡುವುದು ಸಹ ಈ ಕಾರ್ಯಕ್ರಮದ ಸದುದ್ದೇಶವಾಗಿದೆ ಎಂದ ಅವರು, ಸರ್ಕಾರವೇ ಕೈಗಾರಿಕೋದ್ಯಮಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

    ಕಳೆದ 2 ವರ್ಷಗಳಲ್ಲಿ ಕೊರೊನಾದಿಂದಾಗಿ ಸಣ್ಣ ಕೈಗಾರಿಕೆಗಳಿಗೆ ತುಂಬಾ ತೊಂದರೆ ಸಿಲುಕಿವೆ. ಹೀಗಾಗಿ ಸಣ್ಣ ಕೈಗಾರಿಕೆಗಳ ಸಾಲ ಸೌಲಭ್ಯದ ವ್ಯವಸ್ಥೆ ಮತ್ತಷ್ಟು ಸರಳೀಕರಣ ಮಾಡಲಾಗಿದೆ. ಕೈಗಾರಿಕೆಗಳು ಎಂದೂ ಸಹ ಚಲಾವಣೆಯಲ್ಲಿರಬೇಕು. ಅದನ್ನು ಅವಲಂಬಿಸಿರುವ ಉದ್ಯೋಗಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶ ಹೊಂದಲಾಗಿದೆ ಎಂದರು.

    ತುಮಕೂರು ಮತ್ತು ಸಿರಾ ನಡುವೆ 1 ಸಾವಿರ ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್‌ ನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರ 1 ಸಾವಿರ ಕೋಟಿ ರೂ. ಅನುದಾನ ನೀಡುತ್ತಿದೆ. ಹಾಗೆಯೇ ಬಿಜಾಪುರ ಮತ್ತು ಕಲ್ಬುರ್ಗಿ ಮಧ್ಯೆ ಟೆಕ್ಸ್‌ಟೈಲ್ ಪಾರ್ಕ್ ಮಾಡಲಾಗುತ್ತಿದೆ. ಯಾದಗಿರಿ-ರಾಯಚೂರು ಮಧ್ಯೆದ ಬೃಹತ್ ಡ್ರಗ್ ಪಾರ್ಕ್ ಸ್ಥಾಪಿಸಲಾಗುವುದು. ಇದಕ್ಕೂ ಸಹ ಕೇಂದ್ರ ಸರ್ಕಾರ 1 ಸಾವಿರ ಕೋಟಿ ರೂ. ಅನುದಾನ ನೀಡುತ್ತಿದೆ ಎಂದು ಸಚಿವ ನಿರಾಣಿ ತಿಳಿಸಿದರು.

    ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮುಂಬರುವ ದಿನಗಳಲ್ಲಿ ಕೈಗಾರಿಕೆಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ತುಮಕೂರು ಮತ್ತು ಸಿರಾ ಮಧ್ಯೆದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಚಿಂತನೆಯಿದೆ ಎಂದರು.

    ಮುಂದಿನ 10 ವರ್ಷದಲ್ಲಿ ಈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಚಿಂತನೆ ಇದ್ದು, ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಲಾಗುತ್ತಿದೆ. ಈ ಪ್ರಕ್ರಿಯೆ ಇನ್ನೂ ಚರ್ಚೆ ಹಂತದಲ್ಲಿದೆ ಎಂದು ಅವರು ಹೇಳಿದರು.

    ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಅಪರ ಮುಖ್ಯಕಾರ್ಯದರ್ಶಿ ರಮಣರೆಡ್ಡಿ, ಕೈಗಾರಿಕೆ ಅಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿಯ ಎನ್. ಶಿವಶಂಕರ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಜಿ.ಪಂ. ಸಿಇಓ ಡಾ. ಕೆ. ವಿದ್ಯಾಕುಮಾರಿ ಮತ್ತಿತರರು ಉಪಸ್ಥಿತರಿದ್ದರು.

    ನಾಯಕತ್ವ ಬದಲಾವಣೆ ಇಲ್ಲ ನಮ್ಮ ರಾಜ್ಯದಲ್ಲಿ ಯಾವುದೇ ರೀತಿಯ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ತುಮಕೂರು: ಜಿಲ್ಲೆಯ ನಿವಾಸಿಗಳ ದಶಕಗಳ ಕನಸಾದ ‘ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ’ ನನಸಾಗುವ ಹೊಸ್ತಿಲಿಗೆ ಬಂದು ತಲುಪಿದೆ. ಯೋಜನೆಯ ಸುದೀರ್ಘ…

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ

    August 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.