nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025
    Facebook Twitter Instagram
    ಟ್ರೆಂಡಿಂಗ್
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    • ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
    • ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
    • ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    • ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಯಗಡ ಜಿಲ್ಲೆಯಲ್ಲಿ ಭಯೋತ್ಪಾದನೆಯ ಭಾರಿ ಸಂಚು: ದೋಣಿಗಳಲ್ಲಿ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಪತ್ತೆ
    ರಾಷ್ಟ್ರೀಯ ಸುದ್ದಿ August 18, 2022

    ರಾಯಗಡ ಜಿಲ್ಲೆಯಲ್ಲಿ ಭಯೋತ್ಪಾದನೆಯ ಭಾರಿ ಸಂಚು: ದೋಣಿಗಳಲ್ಲಿ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಪತ್ತೆ

    By adminAugust 18, 2022No Comments2 Mins Read
    maharastra

    ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಭಯೋತ್ಪಾದನೆಯ ಭಾರಿ ಸಂಚು ಬಯಲಾಗಿದೆ. ಜಿಲ್ಲೆಯಲ್ಲಿ ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗಿದ್ದು, ದೋಣಿಗಳಲ್ಲಿ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಸಧ್ಯ ಈ ದೋಣಿಗಳನ್ನು ಪೊಲೀಸರು ವಶಪಡಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

    ಪೊಲೀಸರು ರಾಯಗಢದಲ್ಲಿ ಮೊದಲನೆಯ ದೋಣಿಯನ್ನು ಶ್ರೀವರ್ಧನ್ ತೆಹಸಿಲ್‌ನ ಹರಿಹರೇಶ್ವರ ಬೀಚ್‌ನಲ್ಲಿ ಮತ್ತು ಎರಡನೆಯದು ಭರನ್ ಖೋಲ್ ದಡದಲ್ಲಿ ಪತ್ತೆಯಾಗಿವೆ.ಹರಿಹರೇಶ್ವರ ಕಡಲತೀರದಲ್ಲಿ ಪತ್ತೆಯಾದ ಬೋಟ್‌ನಲ್ಲಿ 3 ಎಕೆ-47 ಪತ್ತೆಯಾಗಿದ್ದು, ಇನ್ನೊಂದು ಬೋಟ್‌ನಲ್ಲಿ ಲೈಫ್ ಜಾಕೆಟ್‌ಗಳು ಮತ್ತು ಕೆಲವು ದಾಖಲೆಗಳು ಪತ್ತೆಯಾಗಿವೆ. ಹೀಗಾಗಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.  ಸದ್ಯ ಈ ಬೋಟ್ ಗಳ ಮಾಲೀಕರು ಯಾರು, ಇಲ್ಲಿಗೆ ಹೇಗೆ ತಲುಪಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.


    Provided by
    Provided by

    ಭದ್ರತಾ ಕಂಪನಿಯೊಂದಿಗೆ ಸಂಪರ್ಕ?

    ಪ್ರಾಥಮಿಕ ಮಾಹಿತಿ ಪ್ರಕಾರ ಇದು ಒಮಾನ್ ದೇಶದ ಭದ್ರತಾ ಬೋಟ್ ಆಗಿದ್ದು, ರಾಯಗಢ ಕರಾವಳಿಗೆ ಬಂದಿದೆ. ಇದೀಗ ನಿರುಪಯುಕ್ತವಾಗಿರುವ ಈ ಬೋಟ್‌ನಿಂದ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಈ ಬಗ್ಗೆ ಪೊಲೀಸರು ಇನ್ನೂ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಕೇಂದ್ರೀಯ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದ್ದು, ಅವರು ಕೂಡ ತನಿಖೆಯ ಮೇಲೆ ನಿಗಾ ಇರಿಸಿದ್ದಾರೆ. ಮಾಹಿತಿಯ ಪ್ರಕಾರ, ಈ ಬೋಟ್ ಬಹುರಾಷ್ಟ್ರೀಯ ಕಂಪನಿಯೊಂದಿಗೆ ಸಂಪರ್ಕ ಹೊಂದಿದೆ, ಇದನ್ನು ಕಂಪನಿಯು ಜೀ ನ್ಯೂಸ್ ಜೊತೆಗಿನ ವಿಶೇಷ ಸಂಭಾಷಣೆಯಲ್ಲಿ ಖಚಿತಪಡಿಸಿದೆ. ಆದರೆ, ಮಹಾರಾಷ್ಟ್ರ ಎಟಿಎಸ್ ಘಟನಾ ಸ್ಥಳಕ್ಕೆ ತಲುಪಿದ್ದು, ದೋಣಿಯನ್ನು ತನಿಖೆ ನಡೆಸಲಾಗುತ್ತಿದೆ.

    ಈ ಸಂಸ್ಥೆಯು ಕಡಲ ಭದ್ರತೆಗೆ ಸಂಬಂಧಿಸಿದೆ ಎಂದು ಕಂಪನಿಯು ತಿಳಿಸಿದೆ ಮತ್ತು ಈ ಒಂದು ದೋಣಿ ಸಮುದ್ರದಲ್ಲಿ ಉರುಳಿಬಿದ್ದಿದೆ ಅದನ್ನು ರಾಯಗಢದಲ್ಲಿ ವಶಪಡಿಸಿಕೊಳ್ಳಲಾಗಿದೆ. ಕಂಪನಿಯ ಹಿರಿಯ ಅಧಿಕಾರಿಗಳು ಆಡಳಿತದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕಂಪನಿ ತಿಳಿಸಿದೆ. ಗುರುವಾರ ಸಂಜೆಯೊಳಗೆ ಈ ಬಗ್ಗೆ ಸದನಕ್ಕೆ ತಿಳಿಸುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಗೃಹ ಸಚಿವರಿಗೆ ಸೂಚಿಸಿದ್ದಾರೆ. ರಾಯಗಡ ಜಿಲ್ಲಾ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.

    ದೇಶದ ಕಡಲ ಗಡಿಯ ಮೂಲಕ ಉಗ್ರರು ಒಳನುಸುಳುವ ಅಪಾಯ ಯಾವಾಗಲೂ ಇರುತ್ತದೆ. 26/11ರ ಮುಂಬೈ ದಾಳಿಯ ಸಂದರ್ಭದಲ್ಲೂ ಪಾಕ್ ಭಯೋತ್ಪಾದಕರು ಸಮುದ್ರದ ಮೂಲಕ ಭಾರತದೊಳಗೆ ನುಸುಳಿ ಮುಂಬೈನಲ್ಲಿ ಅತಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಿದ್ದರು. 2008 ರಲ್ಲಿ ನಡೆದ ಈ ದಾಳಿಯಲ್ಲಿ, ತಾಜ್ ಹೋಟೆಲ್ ಸೇರಿದಂತೆ ಮುಂಬೈನ ಜನನಿಬಿಡ ಪ್ರದೇಶಗಳಲ್ಲಿ ಭಯೋತ್ಪಾದಕರು ವ್ಯವಸ್ಥಿತ ರೀತಿಯಲ್ಲಿ ದಾಳಿ ನಡೆಸಿದ್ದರು. ಉಗ್ರರ ದಾಳಿಯಲ್ಲಿ 160 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಿರುವಾಗ ಈ ಅನುಮಾನಾಸ್ಪದ ಬೋಟ್ ಪತ್ತೆಯಾದ ನಂತರ ಮಹಾರಾಷ್ಟ್ರದಿಂದ ದೆಹಲಿಯವರೆಗೂ ಸಂಚಲನ ಮೂಡಿಸಿದ್ದು, ರಾಜ್ಯ ಆಡಳಿತದಿಂದ ಕೇಂದ್ರ ತನಿಖಾ ಸಂಸ್ಥೆಯವರೆಗೂ ಎಚ್ಚೆತ್ತುಕೊಂಡಿದೆ. ಈಗ ಈ ವಿಷಯವನ್ನು ಕೂಲಂಕುಷವಾಗಿ ತನಿಖೆ ಆರಂಭವಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸರಗೂರು :  ಕನಕದಾಸರು ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಮತ್ತು ದಾರ್ಶನಿಕ 15 — 16ನೇ ಶತಮಾನದಲ್ಲಿ ಜಾತಿ…

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025

    ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ

    November 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.