ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕ್ರಿಕೆಟ್ ಪ್ರೇಮಿ, ಈಗಾಗಲೇ ಹಲವಾರು ಪಂದ್ಯಾಟಗಳನ್ನು ಸಿಎಂ ವೀಕ್ಷಿಸಿದ್ದಾರೆ. ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವನ್ನು ಸಿಎಂ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಕೆ.ಎನ್.ರಾಜಣ್ಣ ಹಾಗೂ ಬೈರತಿ ಸುರೇಶ್ ಸಾಥ್ ನೀಡಿದರು.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ Royal Challengers Bengaluru vs Delhi Capitals ನಡುವಿನ ಪಂದ್ಯ ವೀಕ್ಷಿಸುತ್ತಾ, ಪ್ರೇಕ್ಷಕರ ಜೊತೆ ಸೇರಿ ನಮ್ಮವರನ್ನು ಪ್ರೋತ್ಸಾಹಿಸಿದೆ ಎಂದು ಬರೆದುಕೊಂಡಿದ್ದಾರೆ.
ನಮ್ಮ ಆರ್‌ಸಿಬಿ ಉತ್ತಮ ಬ್ಯಾಟ್ಸ್‌ಮನ್‌ಗಳು ಹಾಗೂ ಅತ್ಯುತ್ತಮ ಬೌಲರ್ ಗಳನ್ನು ಒಳಗೊಂಡ ಒಂದು ಸಮತೋಲಿತ ತಂಡವಾಗಿ ಈ ವರೆಗೆ ಪ್ರದರ್ಶನ ನೀಡುತ್ತಾ ಬಂದಿದ್ದು, ಇದೇ ರೀತಿ ಮುಂದುವರೆದರೆ ಈ ಬಾರಿ ಕಪ್ ಗೆಲ್ಲಲಿದೆ ಎನ್ನುವ ವಿಶ್ವಾಸ ನನ್ನದು ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW