ತುಮಕೂರು: ಜಿಲ್ಲೆಯ 94 ಅಂಗನವಾಡಿ ಕಾರ್ಯಕರ್ತೆ ಹಾಗೂ 293 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿಗಳಲ್ಲಿ ಅಪೂರ್ಣಗೊಂಡಿರುವ ಅರ್ಜಿಗಳನ್ನು ಮತ್ತೊಮ್ಮೆ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನ್‌ಲೈನ್ ಮುಖಾಂತರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 3,249 ಹಾಗೂ ಸಹಾಯಕಿಯರ ಹುದ್ದೆಗೆ 2003 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 1,537 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 963 ಅಂಗನವಾಡಿ ಸಹಾಯಕಿಯರ ಅರ್ಜಿಗಳು ಅಪೂರ್ಣಗೊಂಡಿರುತ್ತವೆ. ಅಪೂರ್ಣಗೊಂಡ ಅರ್ಜಿಗಳನ್ನು ಡಿಸೆಂಬರ್ 26 ರಿಂದ 2025ರ ಜನವರಿ 5ರೊಳಗೆ ವೆಬ್ ಸೈಟ್ https://karnemakaone.kar.nic.in/abcd/ ನಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಅಪ್ ಲೋಡ್ ಮಾಡಬಹುದಾಗಿದೆ.
ಅಭ್ಯರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ 4 ಹಂತಗಳನ್ನು ಅನುಸರಿಸಬೇಕು. ಮೊದಲ ಹಂತದಲ್ಲಿ ಹುದ್ದೆಯನ್ನು ಆಯ್ಕೆ ಮಾಡಿ ನಿಗಧಿತ ಅರ್ಜಿ ನಮೂನೆ ತುಂಬಿ ಸಲ್ಲಿಸಬೇಕು. ಬಳಿಕ ಅರ್ಜಿಯ ಐಡಿಯನ್ನು ಟಿಪ್ಪಣಿ ಮಾಡಬೇಕು. 2ನೇ ಹಂತದಲ್ಲಿ ಅಭ್ಯರ್ಥಿಗಳ ಭಾವಚಿತ್ರ ಮತ್ತು ಸಹಿಯನ್ನು ಅಪ್ ಲೋಡ್ ಮಾಡಬೇಕು. 3ನೇ ಹಂತದಲ್ಲಿ ಡಿಜಿ–ಲಾಕರ್ ಮೂಲಕ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಅಪ್‌ಲೋಡ್ ಮಾಡಿದ ದಾಖಲೆಗಳಿಗೆ ಇ–ಸಹಿ ಮಾಡಬೇಕು. 4ನೇ ಹಂತದಲ್ಲಿ ಇ–ಸಹಿ ಹೊಂದಿರುವ ಅರ್ಜಿಯನ್ನು ಡೌನ್‌ಲೋಡ್ ಮಾಡಿ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿ ಅಥವಾ ದೂರವಾಣಿ ಸಂಖ್ಯೆ 0816–2956624ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx