ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗಾಗಿ ಇಂದಿನಿಂದ ಪರೀಕ್ಷೆ ಆರಂಭವಾಗಲಿದೆ. ಕಳೆದ ತಿಂಗಳಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಫೇಲ್ ಆದ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ.
29 ರಿಂದ ಮೇ 16ರವರೆಗೆ ಪಿಯುಸಿ ಪರೀಕ್ಷೆ –2 ನಡೆಯಲಿದ್ದು, ದಾಖಲೆಯ ಪ್ರಮಾಣದಲ್ಲಿ ಪಿಯು ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದಾರೆ. ವಿಶೇಷ ಅಂದ್ರೆ ಪಿಯುಸಿ ಮೊದಲ ಪರೀಕ್ಷೆಯಲ್ಲಿ ಪಾಸ್ ಆಗಿದ್ರೂ ಕೂಡಾ ಹಳೆಯ ಫಲಿತಾಂಶ ಚಾಲೆಂಜ್ ಮಾಡಲು 32 ಸಾವಿರ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಲು ಮುಂದಾಗಿದ್ದಾರೆ.
ಸೋಮವಾರದಿಂದ ಶುರುವಾಗುವ ದ್ವಿತೀಯ ಪಿಯುಸಿ –2 ಪರೀಕ್ಷೆಗೆ ರಾಜ್ಯದಲ್ಲಿ ಒಟ್ಟು 149300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 32 ಸಾವಿರ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಿದ್ರೂ ಫಲಿತಾಂಶ ಹೆಚ್ಚಿಸಲು ಮರು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಇನ್ನು ಪ್ರತಿಯೊಂದು ವಿಷಯದ ಪರೀಕ್ಷೆಯು ಮಧ್ಯಾಹ್ನ 2:15 ರಿಂದ ಸಂಜೆ 4:30 ಗಂಟೆವರೆಗೆ ನಡೆಯಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296