ಸರಗೂರು: ಓದುವುದು ಜೀವನದ ಮುಖ್ಯ ಉದ್ದೇಶವಾಗಬೇಕು. ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ’ ಎಂದು ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಮಹದೇವಸ್ವಾಮಿ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಂಥಾಲಯ ಪಿತಾಮಹ ಹಾಗೂ ಗ್ರಂಥಪಾಲಕರ ದಿನಾಚರಣೆಯನ್ನು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಸಂಘ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಾಯದೊಂದಿಗೆ ಮಂಗಳವಾರದಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರಗೂರು ಸಮೃದ್ಧಿಯಾದ ತಾಲೂಕು. ಈ ತಾಲೂಕಿನಿಂದ ಹಲವಾರು ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳಾಗಿದ್ದಾರೆ. ಕೆ.ಎ.ಎಸ್ ಹಾಗೂ ಐ.ಎ.ಎಸ್ ಓದುವ ಗುರಿಯನ್ನು ಹೊಂದುವ ಮೂಲಕ ಜೀವನದ ದಿಕ್ಕನ್ನು ನಾವು ಗುರುತಿಸಿಕೊಳ್ಳಬೇಕಾಗಿದೆ’ ಎಂದರು
ವನಜಲಸಿರಿ ನಾಡು ಪ್ರಸಿದ್ಧ ದೇವಾಲಯಗಳು ಹಾಗೂ ಜಲಾಶಯಗಳು ಹಾಗೂ ಸಮೃದ್ಧಿ ಸಂಪನ್ಮೂಲಗಳನ್ನು ಹೊಂದಿದೆ. ಇಂಥ ತಾಲೂಕಿನ ಇರುವುದು ನಮ್ಮ ಅದೃಷ್ಟ. ಮುಂದಿನ ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ವಿದ್ಯಾರ್ಥಿಗಳು ಪೂರಕವಾಗಿ ಕೆಲಸ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಉತ್ತಮ ವ್ಯವಸ್ಥೆ ಇದ್ದು, ಸದುಪಯೋಗ ಪಡೆಯಬೇಕು. ಮುಂದಿನ ದಿನಗಳಲ್ಲಿ ತಾಲ್ಲೂಕು ಪಂಚಾಯಿತಿಯಿಂದ ಗ್ರಂಥಾಲಯಕ್ಕೆ ಬೇಕಾದ ಸಹಾಯ ಮತ್ತು ಸಹಕಾರ ನೀಡಲು ಸಿದ್ಧ’ ಎಂದು ತಿಳಿಸಿದರು.
‘ಸ್ವಾತಂತ್ರ್ಯ ಹೋರಾಟದ ಬಗ್ಗೆ ನಾವು ಹೆಚ್ಚು ಓದುವ ಮೂಲಕ ಅಂದಿನ ದಿನಗಳನ್ನು ಮೆಲುಕು ಹಾಕುವ ಅವಶ್ಯಕತೆ ಇದೆ’ ಎಂದು ತಿಳಿಸಿದರು.
ಎಂಸಿ ತಳಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜೆ.ಪರಮೇಶ್ ಮಾತನಾಡಿ, ವಿದ್ಯಾಭ್ಯಾಸ ಎನ್ನುವುದು ಕೇವಲ ಉಚಿತವಾಗಿ ಸಿಗುವುದಿಲ್ಲ. ಅದು ಪರಿಶ್ರಮದಿಂದ ಮಾತ್ರ ಸಾಧ್ಯ. ಈಗ ಸರ್ಕಾರದ ಸೌಲಭ್ಯಗಳಿದ್ದು, ಆ ಸೌಲಭ್ಯಗಳನ್ನು ಪಡೆಯುವ ಮೂಲಕ ಉತ್ತಮ ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಲು ಪ್ರಯತ್ನ ಮಾಡಬೇಕು. ಈ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಗ್ರಾಪಂ ಗ್ರಂಥಪಾಲಕರಾದ ಕೃಷ್ಣೇಗೌಡರವರಿಗೆ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಲೆಕ್ಕಪರಿಶೋಧನೆ ಅಧಿಕಾರಿ ಮಧುಚಂದ್ರ, ಮೈರಾಡ ಪಾನ್ ಅಧಿಕಾರಿ ಶಂಕರ್,ಗ್ರಾಪಂ ಸದಸ್ಯ ಚಂದ್ರಶೇಖರ, ತಾಲೂಕು ಗ್ರಂಥಾಲಯ ಮೇಲ್ವಿಚಾರಕ ಬಿಡಗಲು ಶಿವಣ್ಣ, ಗ್ರಾಮ ಪಂಚಾಯಿತಿ ಗ್ರಂಥಪಾಲಕರು ಬೀದರಹಳ್ಳಿ ಮುತ್ತು, ಸಾಗರೆ ಸುರೇಶ್, ಹೆಗ್ಗನೂರು ಕೃಷ್ಣಗೌಡ, ಹಂಚೀಪುರ ಶಶಿಕಲಾ, ಕಲ್ಲಂಬಾಳು ಸುರೇಶ್, ಎಂ ಸಿ ತಳಲು ಮಹದೇವಸ್ವಾಮಿ, ಬಿ ಮಟಕರೆ ಕೃಷ್ಣಯ್ಯ, ಕೆ.ಬೆಳತ್ತೂರು ಅಂಕನಾಯಕ, ಮನುಗನಹಳ್ಳಿ ಸ್ವಾಮಿ, ಕೃಷ್ಣ, ಶಿವಣ್ಣ, ಇನ್ನೂ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC