ಬೆಂಗಳೂರು: ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಅರ್ಹತೆಗೂ ಮೀರಿ ಅವಕಾಶಗಳನ್ನು ಪಕ್ಷ ನೀಡಿದೆ. ನನ್ನನ್ನು ಗುರುತಿಸಿ ಸಾಕಷ್ಟು ಅವಕಾಶಗಳನ್ನು ಕೊಟ್ಟಿರುವುದಕ್ಕೆ ಆಭಾರಿಯಾಗಿದ್ದೇನೆ. ಸಚಿವ ಸ್ಥಾನದ ತ್ಯಾಗಕ್ಕೆ ಸಿದ್ದ ಎಂದು ಅವರು ಹೇಳಿದ್ದಾರೆ.
ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಎನ್ನುವ ಶಬ್ದ ಹೆಚ್ಚು ಕೇಳಿ ಬರುತ್ತಿದೆ. ಸಚಿವ ಸಂಪುಟ ಪುನರ್ ರಚನೆ ಆದ್ರೆ, ಸಿಎಂ ಪದವಿ ಕೂಡ ಬದಲಾಗುತ್ತಾ ಎನ್ನುವ ಕುತೂಹಲ ಸದ್ಯಕ್ಕೆ ಕೇಳಿ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



