ರಾಮನಗರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಯೊಬ್ಬರ ಮಗ ಪಾನಮತ್ತರಾಗಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತವನ್ನುಂಟು ಮಾಡಿದ್ದು, ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ರಘು ನಾಯಕ್ (65) ಹಾಗೂ ಅವರ ಮಗ ಚಿರಂಜೀವಿ (25) ಮೃತಪಟ್ಟಿದ್ದಾರೆ.
‘ದಾವಣಗೆರೆಯ ರಘು ನಾಯಕ್, ಮಗ ಚಿರಂಜೀವಿ ಹಾಗೂ ಕುಟುಂಬದವರ ಜೊತೆ ಸಿಂಗಪುರ ಲೇಔಟ್ ಬಳಿಯ ಕುವೆಂಪು ನಗರದಲ್ಲಿ ವಾಸವಿದ್ದರು. ಇವರಿಬ್ಬರು ಸಂಬಂಧಿ ವಾಸು ನಾಯಕ್ ಜೊತೆ ಬೈಕ್‌ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ತಿಳಿಸಿದರು. ‘ಅಪಘಾತಕ್ಕೆ ಕಾರಣವಾಗಿರುವ ಆಕಾಶ್ ಹಾಗೂ ಕಾರಿನಲ್ಲಿದ್ದ ನಿಖಿತ್ ಅವರನ್ನು ಬಂಧಿಸಲಾಗಿದೆ. ಇಬ್ಬರೂ ಮದ್ಯ ಕುಡಿದಿರುವುದು ಪರೀಕ್ಷೆಯಿಂದ ಗೊತ್ತಾಗಿದೆ. ಕಾರಿನಲ್ಲಿದ್ದ ಮೂವರು ಯುವಕರು ಪರಾರಿಯಾಗಿದ್ದಾರೆ. ಅಪಘಾತದಲ್ಲಿ ರಘು ಅವರ ಅಳಿಯ ವಾಸು ನಾಯಕ್ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


