nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026
    Facebook Twitter Instagram
    ಟ್ರೆಂಡಿಂಗ್
    • ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ
    • ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
    • ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ
    • ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
    • ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
    • ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ: ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಕರೆ
    ಜಿಲ್ಲಾ ಸುದ್ದಿ December 16, 2025

    ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ: ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಕರೆ

    By adminDecember 16, 2025No Comments2 Mins Read

    ಸರಗೂರು:  ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹ ನೀಡುವುದರಿಂದ ಅವರ ದೌರ್ಬಲ್ಯಗಳ ಹೊರತಾಗಿಯೂ ಅದಮ್ಯ ಶಕ್ತಿ ಅವರಲ್ಲಿದೆ ಎಂಬುದನ್ನು ನಿರೂಪಿಸಲು ಸಾಧ್ಯ ಎಂದು ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಆರ್ಶೀವಾದ ನೀಡಿದರು.

    ಪಟ್ಟಣದ ಅಖಿಲ ನಾಮಧಾರಿಗೌಡ ಸಮುದಾಯದ ಭವನದಲ್ಲಿ ಮಂಗಳವಾರದಂದು ಶ್ರೀ ಚಿಕ್ಕ ದೇವಮ್ಮ ವಿಶೇಷಚೇತನರ ಕ್ಷೇಮಾಭಿವೃದ್ಧಿ ಒಕ್ಕೂಟ ಹಾಗೂ ಜೀವನಜ್ಯೋತಿ ವಿಶೇಷಚೇತನ ಕ್ಷೇಮಾಭಿವೃದ್ಧಿ ಒಕ್ಕೂಟ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ ಅಖಿಲ ನಾಮಧಾರಿಗೌಡರ ಸಂಘ, ಸ್ಥಳಿಯ ಸಂಘ ಸಂಸ್ಥೆಗಳು ಸಹಭಾಗಿತ್ವದೊಂದಿಗೆ ಹಮ್ಮಿಕೊಂಡಿರುವ ಅಂತಾರಾಷ್ಟ್ರೀಯ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ವಿಕಲಚೇತನರ ಏಳಿಗೆಗೆ ಕುಟುಂಬದ ಸದಸ್ಯರು ಮಾತ್ರವಲ್ಲದೇ ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು. ಅಂಗವಿಕಲರಿಗಾಗಿ ಕಾನೂನು ಅಡಿಯಲ್ಲಿ ಅನೇಕ ಹಕ್ಕುಗಳನ್ನು ನೀಡಿದ್ದು, ಅವರ ಶ್ರೇಯಸ್ಸು ಹಾಗೂ ಮಾನವ ಹಕ್ಕುಗಳಿಗೆ ಚ್ಯುತಿ ತರದಂತೆ ಅವರ ಅಭಿವೃದ್ಧಿಯಲ್ಲಿ ಸಹಕಾರ ನೀಡಬೇಕು ಎಂದು ಪ್ರತಿಪಾದಿಸಿದರು.

    ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ವಿಕಲಚೇತನರು ಸಮಾಜದಲ್ಲಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ಆತ್ಮವಿಶ್ವಾಸದಿಂದ ಜೀವನ ನಡೆಸುವಂತೆ ಅವಕಾಶ ಕಲ್ಪಿಸುವುದು ಸಮಾಜ ಹಾಗೂ ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು ಎಂದು   ಹೇಳಿದರು.

    ವಿಕಲಚೇತನ ಮಕ್ಕಳ ಸಬಲೀಕರಣಕ್ಕಾಗಿ ಅನೇಕ ಶಾಲಾ– ಕಾಲೇಜು ಹಾಗೂ ಸಂಘ–ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಕಾಲದಲ್ಲಿ ವಿಕಲಚೇತನರಿಗೆ ವಿದ್ಯಾಭ್ಯಾಸದ ಅವಕಾಶಗಳ ಜೊತೆಗೆ ಕೌಶಲಾಭಿವೃದ್ಧಿಗಳ ಕಲಿಕೆಯು ಅವರ ಬದುಕಿನಲ್ಲಿ ಸಾಧನೆ ಮಾಡುವಂತಹ ಭರವಸೆ ಮೂಡಿಸುತ್ತಿದೆ ಎಂದು ಹೇಳಿದರು.

    ವಿಶೇಷಚೇತನರ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮಿಗಳು ಕೆ.ಶ್ರೀನಿವಾಸ ಕುಮಾರ್ ಮಾತನಾಡಿ, ವಿಕಲಚೇತನರ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಬಗೆಗಿನ ಮಾಹಿತಿಯನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ತಿಳಿಸಿದರು.

    ವಿವೇಕಾನಂದ ಸ್ಮಾರಕ ಆಸ್ಪತ್ರೆ ಮೂಳೆ ಮತ್ತು ಕೀಲು ವೈದ್ಯರು ಡಾ ಎಂ ಆರ್ ಸೀತಾರಾಮ್ ಮಾತನಾಡಿ ಸ್ಥಳೀಯ ಸಂಸ್ಥೆಗಳಲ್ಲಿ ಅಂಗವಿಕಲರಿಗೆ ಅನುಕೂಲವಾಗುವಂತೆ ವೈದ್ಯಕೀಯ ವೆಚ್ಚ, ವಿದ್ಯಾರ್ಥಿವೇತನ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಿ ಎಂದರು.

    ಇದೇ ಸಂದರ್ಭದಲ್ಲಿ ಎಲ್ಲಾ ತಾಲ್ಲೂಕುಗಳ ವಿಶೇಷ ಮಕ್ಕಳಿಗೆ ಆಯೋಜಿಸಲಾದ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿಶೇಷ ಶಾಲಾ ಮಕ್ಕಳು ಸಿದ್ಧಪಡಿಸಿರುವ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

    ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಚಾಮನಾಯಕ, ಇಓ ಪ್ರೇಮ್ ಕುಮಾರ್, ಅಡಳಿತ ಆರೋಗ್ಯಾಧಿಕಾರಿ ಡಾ.ಪಾರ್ಥಸಾರಥಿ, ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಪಪಂ ಅಧ್ಯಕ್ಷೆ ಚೈತ್ರ ಸ್ವಾಮಿ, ಉಪಾಧ್ಯಕ್ಷ ಶಿವಕುಮಾರ್, ವರ್ತಕ ಮಂಡಳಿ ಅಧ್ಯಕ್ಷ ಎಸ್ ಪಿ ಪ್ರಸಾದ್, ಲಯನ್ಸ್ ಕ್ಲಬ್ ಅಧ್ಯಕ್ಷ ಕಬಿನಿ ಭಾಸ್ಕರ್, ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಬಿ.ನಾಗರಾಜು, ವಿಕಲಚೇತನರ ಸಂಯೋಜಕರಾದ ಎಸ್.ಎಸ್.ಮಹಾದೇವಯ್ಯ, ಜವರಾಜು, ಜೀವನ್ ಜ್ಯೋತಿ ವಿಶೇಷಚೇತನರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಎನ್.ನಾಗರಾಜು, ರಮೇಶ್ , ಪುಟ್ಟ, ನಾಗೇಂದ್ರಯ್ಯ ,ಇನ್ನೂ ಮುಖಂಡರು ಸೇರಿದಂತೆ ಹಾಗೂ ವಿಶೇಷಚೇತನರು ಹಾಗೂ ಸ್ವಾಮಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

    ವರದಿ ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಐತಿಹಾಸಿಕ ಇತಿಹಾಸ ಪ್ರಸಿದ್ಧ ಶ್ರೀಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವಕ್ಕೂ ಮೊದಲು ಮಕರ ಸಂಕ್ರಾತಿ…

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.