ಬೆಂಗಳೂರು: 384 ಕೆಎಎಸ್ ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಪೂರ್ವ ನಿಗದಿಯಂತೆ ಆಗಸ್ಟ್ 25 ರಂದೇ ನಡೆಯಲಿದೆ ಎಂದು ಲೋಕಸೇವಾ ಆಯೋಗ ತಿಳಿಸಿದೆ.
ಈಗಾಗಲೇ ಪೂರ್ವಭಾವಿ ಪರೀಕ್ಷೆ ದಿನಾಂಕವನ್ನು ಎರಡು ಬಾರಿ ಮರು ನಿಗದಿ ಮಾಡಿರುವ ಕಾರಣ ಮತ್ತೆ ದಿನಾಂಕ ಬದಲಾವಣೆ ಮಾಡದೆ ನಿಗದಿಪಡಿಸಿರುವಂತೆ ಆಗಸ್ಟ್ 25ರಂದೇ ಪರೀಕ್ಷೆ ನಡೆಸಲಾಗುವುದು ತಿಳಿಸಲಾಗಿದೆ.
ಆಗಸ್ಟ್ 25ರಂದು ಐಬಿಪಿಎಸ್ ಪರೀಕ್ಷೆ ನಡೆಯುತ್ತಿರುವ ದಿನವೇ ಕೆಎಎಸ್ ಪರೀಕ್ಷೆ ನಡೆಸುವುದರಿಂದ ಎರಡು ಹುದ್ದೆಗಳಿಗೆ ಅರ್ಜಿ ಹಾಕಿದ ಹಲವು ಅಭ್ಯರ್ಥಿಗಳು ಒಂದು ಪರೀಕ್ಷೆಯಿಂದ ವಂಚಿತರಾಗುವ ಕಾರಣ ಮುಂದೂಡುವಂತೆ ಮನವಿ ಮಾಡಲಾಗಿತ್ತು.
ಯುಪಿಎಸ್ ಸಿ, ಎಸ್.ಎಸ್.ಸಿ., ಕೆಇಎ ಸೇರಿ ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷಾ ದಿನಾಂಕಗಳನ್ನು ಪರಿಶೀಲಿಸಿ ಮಾಹಿತಿ ಪಡೆದು ಈ ಪರೀಕ್ಷೆಯ ದಿನಾಂಕ ನಿಗದಿಪಡಿಸಲಾಗಿದೆ. ಆಗಸ್ಟ್ 25ಕ್ಕೆ ಪೂರ್ವಭಾವಿ ಪರೀಕ್ಷೆ ದಿನಾಂಕ ನಿಗದಿಪಡಿಸಿ ಜೂನ್ 27ರಂದು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


