ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತುಮಕೂರು, ಹಾಲಪ್ಪ ಪ್ರತಿಷ್ಠಾನ, ಉದ್ಯೋಗ ಕೋಶ–ಐಕ್ಯೂಎಸಿ ಸಹಯೋಗದೊಂದಿಗೆ ಜುಲೈ 6ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೈಲ್ವೇ ನಿಲ್ದಾಣ ರಸ್ತೆ, ತುಮಕೂರು ಇಲ್ಲಿ ಉದ್ಯೋಗ ಮೇಳ-2024 ಆಯೋಜಿಸಲಾಗಿದೆ.
ಬೆಳಗ್ಗೆ 10ಯಿಂದ ಉದ್ಯೋಗ ಮೇಳ ಆರಂಭವಾಗಲಿದೆ. ಗೃಹಸಚಿವ ಡಾ. ಜಿ.ಪರಮೇಶ್ವರ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಮುರುಲೀಧರ ಹಾಲಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ವಿ. ಸೋಮಣ್ಣ ಭಾಗವಹಿಸಲಿದ್ದು, ಇನ್ನೂ ಹಲವಾರು ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ (BA, BSc, BCom, BBA/BBM, BCA, BSW, BE, BVA), ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸುಮಾರು 30ಕ್ಕೂ ಹೆಚ್ಚು ಕಂಪೆನಿಗಳು ನೇಮಕಾತಿ ಮಾಡುತ್ತಿವೆ. ಉದ್ಯೋಗ ಮೇಳದಲ್ಲಿ ಯಾವುದೇ ನೋಂದಣಿ ಶುಲ್ಕವಿರುವುದಿಲ್ಲ.
ಈಗಲೇ ನೋಂದಣಿ ಮಾಡಿಕೊಳ್ಳಿ: https://forms.gle/6m4oXtRNUHoie9766
ಮಾಹಿತಿ ಪಡೆಯಲು ವಾಟ್ಸಪ್ ಗ್ರೂಪ್‌ಗೆ ಸೇರಬಹುದು: https://chat.whatsapp.com/Con0HGs2aCSFZv8WBMuNge
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296