ಕಾರವಾರ: ರಾಜ್ಯದಲ್ಲಿ 34 ಸರ್ವೆ ಎಡಿಎಲ್ ಆರ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 364 ಸರ್ವೆಯರ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಸಿಎಂ ಅನುಮತಿ ನೀಡಿದ್ದಾರೆ. ಸರ್ವೆಯರ್ ಹುದ್ದೆಗಳ ನೇಮಕಾತಿ ಕೂಡ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.
1091 ಲೈಸೆನ್ಸ್ ಸರ್ವೆಯರ್ ಗಳ ನೇಮಕ ಮಾಡಲಾಗಿದೆ. ಗ್ರಾಮ ಆಡಳಿತಾಧಿಕಾರಿ ಹುದ್ದೆ ಖಾಲಿ ಇವೆ. ಒಂದು ಸಾವಿರ ಗ್ರಾಮ ಲೆಕ್ಕಗರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಉಳಿದ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಕ್ರಮ ವಹಿಸಲಾಗಿದೆ. ಈ ಹಿಂದೆ 212 ದಿನಗಳಲ್ಲಿ ವಿಲೇವಾರಿಯಾಗುತ್ತಿದ್ದ ಪ್ರಕರಣಗಳು ಈಗ 76 ದಿನಗಳಲ್ಲಿ ವಿಲೇವಾರಿ ಆಗುತ್ತಿವೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296