nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ

    June 18, 2025

    ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    June 18, 2025

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025
    Facebook Twitter Instagram
    ಟ್ರೆಂಡಿಂಗ್
    • ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ
    • ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ
    • ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು
    • ಜೆಡಿಎಸ್ — ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ: ಜೆಡಿಎಸ್  ಸಿಎಲ್‌ ಪಿ ನಾಯಕ ಸಿ.ಬಿ.ಸುರೇಶ್ ಬಾಬು
    • ಆಟೋ ವ್ಹೀಲಿಂಗ್ ಮಾಡುತ್ತಿದ್ದ ಚಾಲಕನ ಬಂಧನ: ಆಟೋ ವಶ
    • ಮಹಿಳೆಯ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್: ಆರೋಪಿಯ ಬಂಧನ
    • ಸಿಎಂ ನಿವಾಸದ ಮುಂಭಾಗದಲ್ಲೇ ಧರೆಗುರುಳಿದ ಮರ: ವಾಹನಗಳಿಗೆ ಹಾನಿ
    • ಬೆಂಗಳೂರು ಮೆಟ್ರೋದಲ್ಲಿ ನಂದಿನಿ ಬದಲು ಗುಜರಾತ್ ನ ಅಮುಲ್ ಗೆ ಜಾಗ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ–ಪಾಕಿಸ್ತಾನ ಯುದ್ಧ ಸಂದರ್ಭ : ನಾಗರಿಕರ ರಕ್ಷಣೆಗಾಗಿ 3,000 ಸ್ವಯಂ ಸೇವಕರ ನೇಮಕ
    ತುಮಕೂರು May 12, 2025

    ಭಾರತ–ಪಾಕಿಸ್ತಾನ ಯುದ್ಧ ಸಂದರ್ಭ : ನಾಗರಿಕರ ರಕ್ಷಣೆಗಾಗಿ 3,000 ಸ್ವಯಂ ಸೇವಕರ ನೇಮಕ

    By adminMay 12, 2025No Comments3 Mins Read
    shubha kalyan

    ತುಮಕೂರು: ರಾಷ್ಟ್ರದ ಗಡಿಯಲ್ಲಿ ಭಾರತ–ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸಲು ಜಿಲ್ಲೆಯಲ್ಲಿ 3,000 ಸ್ವಯಂ ಸೇವಕರನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಯಂ ಸೇವಕರನ್ನು ನೇಮಕ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸ್ವಯಂ ಸೇವಕರ ನೇಮಕಾತಿಗಾಗಿ ಕಮ್ಯಾಂಡೆಂಟ್ ಹೋಮ್ ಗಾರ್ಡ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ನೆಹರು ಯುವ ಕೇಂದ್ರದ ಉಪನಿರ್ದೇಶಕರನ್ನು ನಿಯೋಜಿಸಲಾಗಿದೆ. ಯುದ್ಧಕ್ಕೆ ಸಂಬಂಧಿಸಿದಂತೆ ತುರ್ತು ಸಂದರ್ಭಗಳು ಘೋಷಣೆಯಾದಾಗ ಜನರ ಜೀವ ಹಾಗೂ ಆಸ್ತಿಗಳ ರಕ್ಷಣೆಗಾಗಿ ಸ್ವಯಂ ಸೇವಕರ ನೆರವನ್ನು ಪಡೆಯಲಾಗುವುದು ಎಂದು ತಿಳಿಸಿದರು.


    Provided by

    ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಿಚ್ಛಿಸುವವರು 18 ವರ್ಷ ವಯೋಮಾನದವರಾಗಿದ್ದು, ದೈಹಿಕವಾಗಿ ಸದೃಢರಾಗಿರಬೇಕು. ಆಸಕ್ತರು ನಿಗಧಿತ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಬಗ್ಗೆ ಈಗಾಗಲೇ ಸ್ಥಳೀಯ ಆಡಳಿತ ವ್ಯಾಪ್ತಿಯಲ್ಲಿ ಪ್ರಚುರ ಪಡಿಸಲಾಗಿದೆ. ಸ್ವಯಂ ಸೇವಕರಾಗಿ ಆಯ್ಕೆಯಾದವರಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದರು.
    ತುರ್ತು ಸಂದರ್ಭಗಳನ್ನು ಎದುರಿಸಲು ಹಾಗೂ ಸಾರ್ವಜನಿಕರಿಗೆ ನೆರವು ನೀಡಲು ಈಗಾಗಲೇ ಜಿಲ್ಲೆಯಲ್ಲಿ ಗುರುತಿಸಿರುವ ಸುಮಾರು 20 ಸೂಕ್ಷ್ಮ ಪ್ರದೇಶಗಳಿಗೆ ಬಿಎಸ್ ಎನ್ ಎಲ್ ವತಿಯಿಂದ ಹಾಟ್ ಲೈನ್(Hot line) ಸಂಪರ್ಕ ನೀಡಲಾಗುವುದು. ಇದರಿಂದ ಸ್ಥಳೀಯ ಸಮಸ್ಯೆಗಳನ್ನು ತ್ವರಿತವಾಗಿ ಜಿಲ್ಲಾಡಳಿತಕ್ಕೆ ತಲುಪಿಸಲು ಅನುಕೂಲವಾಗಲಿದೆ. ಅಲ್ಲದೆ, ನಗರ ಸ್ಥಳೀಯ ಸಂಸ್ಥೆ ಹಾಗೂ ತಾಲ್ಲೂಕು ಕಚೇರಿಗಳಲ್ಲಿಯೂ ಸಹಾಯವಾಣಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಮುಂಜಾಗ್ರತಾ ಕ್ರಮವಾಗಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 24X7 ಸಹಾಯವಾಣಿ ಕೇಂದ್ರ ಸ್ಥಾಪಿಸಲು ಸರ್ಕಾರ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿಯ ಇಂಟಿಗ್ರೇಟೆಡ್ ಕಮ್ಯಾಂಡ್ ಅಂಡ್ ಕಂಟ್ರೋಲ್ ಕೇಂದ್ರದಲ್ಲಿ ಸಹಾಯವಾಣಿ ಸಂಖ್ಯೆ: 0816–2213400ಯನ್ನು ಸ್ಥಾಪಿಸಲಾಗಿದೆ. ಈ ಸಹಾಯವಾಣಿ ಕೇಂದ್ರದಲ್ಲಿ ಕಂದಾಯ, ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಅಧಿಕಾರಿಗಳು ಉಪಸ್ಥಿತರಿದ್ದು, ಸ್ವೀಕೃತ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ಪರಿಹಾರ ನೀಡಲಿದ್ದಾರೆ. ಯುದ್ಧ ದಾಳಿ ಸಂಭವಿಸಿದಾಗ ಎಚ್ಚರಿಕೆ ಸದ್ದು ನೀಡಲು ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಸೈರನ್ ಅಳವಡಿಸಬೇಕು ಎಂದು ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ.

    ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ದಾಸ್ತಾನು ಇರುವ ರಾಗಿ, ಗೋಧಿ, ಅಕ್ಕಿ, ಮತ್ತಿತರ ಅಗತ್ಯ ವಸ್ತುಗಳ ಅಭಾವ ಸೃಷ್ಟಿಯಾಗದಂತೆ ಹಾಗೂ ಆಹಾರ ಧಾನ್ಯಗಳು ಕ್ರಮವಾಗಿ ಕಾಳ ಸಂತೆಯಲ್ಲಿ ಮಾರಾಟವಾಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರಲ್ಲದೆ, ಜನರು ಆತಂಕ ಪಡುವ ಸುಳ್ಳು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಬಾರದು. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶಗಳನ್ನು ಹರಿಯಬಿಡುವವರು ಯಾರೇ ಆಗಲಿ ಅವರನ್ನು ಕಾನೂನು ಕ್ರಮಕ್ಕೆ ಗುರಿಪಡಿಸಲಾಗುವುದು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸಾಮಾಜಿಕ ಜಾಲತಾಣಗಳ ಮೇಲೆ 24X7ನಿಗಾವಹಿಸಲಿದೆ ಎಂದು ತಿಳಿಸಿದರು.

    ತುರ್ತು ಸೇವೆ ಒದಗಿಸುವ ಪೊಲೀಸ್, ಅಗ್ನಿಶಾಮಕದಳ, ಬೆಸ್ಕಾಂ, ಆರೋಗ್ಯ ಇಲಾಖೆಗಳಲ್ಲಿ ಮಾನವ ಸಂಪನ್ಮೂಲ ಹಾಗೂ ಮೂಲಭೂತ ಸೌಕರ್ಯಗಳನ್ನು ಸಿದ್ಧವಿಟ್ಟುಕೊಳ್ಳಲು ಸರ್ಕಾರ ನಿರ್ದೆಶನ ನೀಡಿರುವ ಹಿನ್ನೆಲೆಯಲ್ಲಿ ರಜೆ ಮೇಲೆ ತೆರಳಿರುವ ತುರ್ತು ಸೇವೆ ನೀಡುವ ಇಲಾಖೆಗಳ ಅಧಿಕಾರಿ/ನೌಕರರ ರಜೆಯನ್ನು ರದ್ದುಪಡಿಸಿ, ಮರಳಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ. ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ 9,000 ಹಾಸಿಗೆಗಳು ಲಭ್ಯವಿದ್ದು, 12 ಆಕ್ಸಿಜನ್ ಪ್ಲಾಂಟ್, ವೆಂಟಿಲೇಟರ್, ಆಂಬುಲೆನ್ಸ್ ಗಳು ಸುಸ್ಥಿತಿಯಲ್ಲಿವೆ ಎಂದು ಮಾಹಿತಿ ನೀಡಿದರು.

    ಸಾರ್ವಜನಿಕ ಸಭೆ/ಸಮಾರಂಭಗಳಿಗೆ ಅನುಮತಿ ಇಲ್ಲ:

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, ಯುದ್ಧದ ಸಂದರ್ಭದಲ್ಲಿ ಸಾರ್ವಜನಿಕ ಸಭೆ/ಸಮಾರಂಭಗಳಿಗೆ ಅನುಮತಿ ನೀಡಲಾಗುವುದಿಲ್ಲ. ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಮದುವೆ, ಮತ್ತಿತರ ಶುಭ ಸಮಾರಂಭಗಳಿಗೆ ಕಡಿಮೆ ಜನರು ಮಾತ್ರ ಸೇರಲು ಅವಕಾಶ ನೀಡಲಾಗುವುದು ಎಂದು ಹೇಳಿದರಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಯಬಿಡುವವರನ್ನು ಕಾನೂನು ಕ್ರಮಕೈಗೊಳ್ಳಲಾಗುವುದು. ಯಾವುದೇ ತಪ್ಪು ಸಂದೇಶಗಳು ವಾಟ್ಸ್ಪ್ ಮೂಲಕ ಹಂಚಿಕೊಂಡರೆ ಸದರಿ ಗ್ರೂಪ್ ಅಡ್ಮಿನ್ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಹೆಚ್ಚಿನ ಜನ ಸೇರುವ ಶಾಪಿಂಗ್ ಮಾಲ್, ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಶ್ವಾನದಳ, ಪೊಲೀಸ್ ಸಿಬ್ಬಂದಿಗಳಿಂದ ತಪಾಸಣೆ ನಡೆಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿಯೂ ಎಚ್ಚರಿಕೆವಹಿಸಲಾಗಿದೆ. ಜಿಲ್ಲೆಯಲ್ಲಿ 250 ನಾಕಾಬಂದಿ ಬಿಂದುಗಳನ್ನು ಗುರುತಿಸಲಾಗಿದೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡು ಬಂದರೆ ಅದನ್ನು ಮುಟ್ಟದೆ ಸಹಾಯ ವಾಣಿ ಸಂಖ್ಯೆ: 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಹೇಳಿದರು.

    ಸರ್ಕಾರದಿಂದ ಮಾರ್ಗಸೂಚಿಗಳು ಬಂದ ಕೂಡಲೇ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಾಕ್ ಡ್ರಿಲ್(ಅಣಕು ಪ್ರದರ್ಶನ) ಮಾಡಲಾಗುವುದು. ಉದ್ವಿಗ್ನ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಜಿಲ್ಲೆಯಲ್ಲಿ ಕೋಮು ಭಾವನೆಯನ್ನು ಕೆರಳಿಸುವ ಗಲಭೆಗಳಿಗೆ ಅವಕಾಶ ನೀಡಬಾರದು. ಯಾವುದೇ ಪ್ರತಿಭಟನೆಗಳಿಗೂ ಅನುಮತಿ ನೀಡಲಾಗುವುದಿಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ಸಂದೇಶ ಬಂದರೆ ಪ್ರತಿಯೊಬ್ಬರೂ ಅನುಸರಿಸಬೇಕು. ತಪ್ಪಿದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಸ್ಪಷ್ಟಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

     

    admin
    • Website

    Related Posts

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025

    ಜೆಡಿಎಸ್ — ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ: ಜೆಡಿಎಸ್  ಸಿಎಲ್‌ ಪಿ ನಾಯಕ ಸಿ.ಬಿ.ಸುರೇಶ್ ಬಾಬು

    June 18, 2025

    ಜೆಡಿಎಸ್ ನ ಮಿಸ್ಡ್ ಕಾಲ್ ಅಭಿಯಾನದಲ್ಲಿ ಉತ್ಸಾಹದಿಂದ ಯುವಕರು ಪಾಲ್ಗೊಳ್ಳುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    June 17, 2025
    Our Picks

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025

    ಪತನಗೊಂಡ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು: ಅಮಿತ್ ಶಾ

    June 13, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ

    June 18, 2025

    ಬೆಳಗಾವಿ: ಬಸ್ ಗಳಲ್ಲಿ ಪ್ರಯಾಣದ ವೇಳೆ ಕಿಟಕಿ ಸೀಟ್ ಬಳಿ ಕುಳಿತುಕೊಳ್ಳುವುದು ಎಲ್ಲರಿಗೂ ಇಷ್ಟವಾದ ವಿಚಾರ, ಇಲ್ಲೊಂದು ಕಡೆ ಕಿಟಕಿ…

    ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    June 18, 2025

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025

    ಜೆಡಿಎಸ್ — ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ: ಜೆಡಿಎಸ್  ಸಿಎಲ್‌ ಪಿ ನಾಯಕ ಸಿ.ಬಿ.ಸುರೇಶ್ ಬಾಬು

    June 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.