ನವದೆಹಲಿ: ರಷ್ಯಾದ ರಕ್ಷಣಾ ಸಚಿವಾಲಯವು ಈ ವರ್ಷದ ಏಪ್ರಿಲ್‌ನಿಂದ ಭಾರತ ಸೇರಿದಂತೆ ಇತರೆ ದೇಶಗಳ ನಾಗರಿಕರನ್ನು ಸೇನೆಗೆ ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಿದೆ ಎಂದು ಅಲ್ಲಿನ ರಾಯಭಾರ ಕಚೇರಿ ಮಾಹಿತಿ ನೀಡಿದೆ.
ಉಕ್ರೇನ್ ನಲ್ಲಿ ರಷ್ಯಾ ನಡೆಸುತ್ತಿರುವ ವಿಶೇಷ ಸೇನಾ ಕಾರ್ಯಾಚರಣೆಯಲ್ಲಿ ಭಾರತೀಯ ಪ್ರಜೆಗಳು ಮೃತಪಟ್ಟಿರುವುದು ದುರದೃಷ್ಟಕರ ಎಂದು ರಷ್ಯಾದ ರಾಯಭಾರ ಕಚೇರಿ ಸಂತಾಪ ಸೂಚಿಸಿದೆ. ಅಲ್ಲದೇ ರಷ್ಯಾದ ಸಶಸ್ತ್ರ ಪಡೆಗಳಿಗೆ ಭಾರತೀಯರ ನೇಮಕಾತಿಯನ್ನು ನಿಲ್ಲಿಸಲಾಗಿದೆ ಎಂದು ಹೇಳಿದೆ.
ರಷ್ಯಾ ಸೇನೆಗೆ ಸೇರಲು ಸ್ವಯಂಪ್ರೇರಣೆಯಿಂದ ಒಪ್ಪಂದಕ್ಕೆ ಸಹಿ ಹಾಕಿರುವ ಮತ್ತು ಭಾರತಕ್ಕೆ ಮರಳಲು ಬಯಸುವ ಭಾರತೀಯ ಪ್ರಜೆಗಳ ಗುರುತಿಸುವಿಕೆ ಮತ್ತು ಬಿಡುಗಡೆಗೊಳಿಸುವಿಕೆಗೆ ಸಂಬಂಧಿಸಿ ಉಭಯ ದೇಶಗಳು ನಿಕಟ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ರಾಯಭಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಸ್ತುತ 69 ಭಾರತೀಯ ಪ್ರಜೆಗಳು ರಷ್ಯಾದ ಸೇನೆಯಿಂದ ಬಿಡುಗಡೆಗಾಗಿ ಕಾಯುತ್ತಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಶುಕ್ರವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ.
ಭಾರತೀಯರನ್ನು ಶೀಘ್ರವೇ ಬಿಡುಗಡೆಗೊಳಿಸುವ ಕುರಿತು ರಷ್ಯಾ ಭರವಸೆ ನೀಡಿದೆ ಎಂದು ಮೋದಿ ಜೊತೆಗಿದ್ದ ಅಧಿಕಾರಿಯೊಬ್ಬರು ತಿಳಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296