ತುಮಕೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಲು ಹಾಗೂ ಹವಾಮಾನ ಕ್ರಮಗಳಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ತುಮಕೂರು ಪ್ರಾದೇಶಿಕ ಕಚೇರಿಯು ವಿಶೇಷ ‘ರೀಲ್ಸ್ ಸ್ಪರ್ಧೆ’ಯನ್ನು ಹಮ್ಮಿಕೊಂಡಿದೆ.
ಈ ಬಾರಿಯ ಸ್ಪರ್ಧೆಯನ್ನು “ಪ್ರಕೃತಿಯಿಂದ ಪ್ರೇರಿತ, ಹವಾಮಾನಕ್ಕಾಗಿ: ನಮ್ಮ ಭವಿಷ್ಯಕ್ಕಾಗಿ” ಎಂಬ ಧೇಯವಾಕ್ಯದಡಿ ಆಯೋಜಿಸಲಾಗಿದೆ. ಪರಿಸರ ಸಂರಕ್ಷಣೆ, ಸುಸ್ಥಿರ ಜೀವನಶೈಲಿ ಅಳವಡಿಸಿಕೊಳ್ಳುವುದು, ಹವಾಮಾನ ಬದಲಾವಣೆ ತಡೆಗಟ್ಟುವುದು ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಈ ವಿಶಿಷ್ಟ ಸ್ಪರ್ಧೆಯ ಪ್ರಮುಖ ಉದ್ದೇಶವಾಗಿದೆ.
ಭಾಗವಹಿಸುವುದು ಹೇಗೆ?
ಸ್ಪರ್ಧೆಯಲ್ಲಿ ಆಸಕ್ತಿ ಇರುವ ಸಾರ್ವಜನಿಕರು ಪರಿಸರ ಜಾಗೃತಿಯ ಸಂದೇಶ ಸಾರುವ ರೀಲ್ಸ್‌ಗಳನ್ನು ತಯಾರಿಸಿ, ಅವುಗಳ ಲಿಂಕ್ ಅನ್ನು ಮಂಡಳಿಯ ಅಧಿಕೃತ ಇ-ಮೇಲ್ ವಿಳಾಸವಾದ tumkur@kspcb.gov.in ಗೆ ಕಳುಹಿಸಿಕೊಡಬೇಕಾಗಿ ಪ್ರಾದೇಶಿಕ ಕಚೇರಿಯ ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


