ಬೆಂಗಳೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವನನ್ನು ಬೆಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶಶಾಂಕ್(26) ಬಂಧಿತ ಆರೋಪಿಯಾಗಿದ್ದಾನೆ.
ಶಶಾಂಕ್ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದ. ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡ್ತಿದ್ದ. ಹೀಗಾಗಿ ಸಿಸಿಬಿ ಪೊಲೀಸರು ಶಶಾಂಕ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಈತನ ಮೇಲೆ 7 ಪ್ರಕರಣಗಳು ದಾಖಲಾಗಿರೋದು ಬೆಳಕಿಗೆ ಬಂದಿದೆ.


