ಅಕ್ಟೋಬರ್ 1 ರಿಂದ ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾನೂನು ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಗೃಹ ಇಲಾಖೆಯಿಂದ ಹೊರಡಿಸಿದ ಪ್ರಕಟಣೆಯಲ್ಲಿ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತ ಮೃತ್ಯುಂಜಯ್ ಕುಮಾರ್ ನಾರಾಯಣ್ ಈ ಮಾಹಿತಿ ನೀಡಿದ್ದಾರೆ.
ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾನೂನು ಶಿಕ್ಷಣ ಸಂಸ್ಥೆಗೆ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ನೀಡಿಕೆ, ಮತದಾರರ ಪಟ್ಟಿ ಉದ್ದೇಶಕ್ಕೆ ಜನನ ಪ್ರಮಾಣಪತ್ರ ಒಂದೇ ದಾಖಲೆಯಾಗಿ ಬಳಸಲು ಈ ಕಾನೂನು ಅನುಮತಿಸುತ್ತದೆ.


