ಇವಿಎಂ–ವಿವಿ ಪ್ಯಾಟ್ ತಾಳೆಯ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿರುವುದು ವಿಪಕ್ಷಗಳಿಗೆ ಭಾರೀ ಮುಖಭಂಗವಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ತಿಳಿಸಿದ್ದಾರೆ.
ಮತಪತ್ರ ವ್ಯವಸ್ಥೆ ಮರುಜಾರಿಗೆ ಒತ್ತಾಯಿಸುವ ಮೂಲಕ ಕಾಂಗ್ರೆಸ್ ಮತಗಟ್ಟೆ ವಶದಂತಹ ಅಕ್ರಮ ಎಸಲು ಬಯಸಿತ್ತು. ಆದರೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನಿಂದಾಗಿ ವಿಪಕ್ಷಗಳಿಗೆ ಹಿನ್ನಡೆಯಾಗಿದೆ ಎಂದರು.
ಚುನಾವಣಾ ಅಕ್ರಮ ತಡೆಯಲು ಮತ್ತು ಪಾರದರ್ಶಕತೆ ಕಾಯ್ದಕೊಳ್ಳಲು ವಿದ್ಯುನ್ಮಾನ ಮತಯಂತ್ರಗಳಲ್ಲಿ ಚಲಾವಣೆಯಾದ ಮತಗಳ ಪರಿಶೀಲನೆಗೆ ವಿವಿಪ್ಯಾಟ್ ವ್ಯವಸ್ಥೆ ಒದಗಿಸಲಾಗಿದೆ. ಆದರೆ ಇದರಲ್ಲಿ ದೋಷಗಳಿದ್ದು ಚಲಾವಣೆಯಾದ ಎಲ್ಲ ವಿವಿಪ್ಯಾಟ್ ಚೀಟಿಗಳ ಪರಿಶೀಲಿನೆಗೆ ಅವಕಾಶ ನೀಡಬೇಕೆಂದು ವಿಪಕ್ಷಗಳು ಅರ್ಜಿಗಳನ್ನು ಸಲ್ಲಿಸಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


