ನವದೆಹಲಿ: ದೆಹಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ ಬಿಜೆಪಿ ತೆರೆ ಎಳೆದಿದ್ದು, ರೇಖಾ ಗುಪ್ತಾ ಅವರನ್ನು ದೆಹಲಿ ಮುಖ್ಯಮಂತ್ರಿಯಾಗಿ ಘೋಷಿಸಿದ್ದು, ಪರ್ವೇಶ್ ವರ್ಮ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ. ರೇಖಾ ಗುಪ್ತಾ (ಶಾಲಿಮಾರ್ ಬಾಗ್ ಶಾಸಕಿ) ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷೆಯೂ ಆಗಿದ್ದಾರೆ. 29,595 ಮತಗಳ ಅಂತರದಿಂದ ತಮ್ಮ ಸ್ಥಾನವನ್ನು ಗೆದ್ದಿದ್ದಾರೆ.
ಈ ಬಿಜೆಪಿ ಶಾಸಕರ ಸಭೆಯಲ್ಲಿ ಸಿಎಂ ಹೆಸರನ್ನು ಅಂತಿಮಗೊಳಿಸಲಾಗಿದೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ನಾಳೆ (ಫೆಬ್ರವರಿ 20) ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4