ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ“ಕಟ್ಟಡ ಮತ್ತು ಇತರೆ ನಿಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ 9,60,000 ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಎಸ್. ಹೊರಟ್ಟಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ, ಕಾರ್ಮಿಕ ಇಲಾಖೆ ಸಚಿವ ಸಂತೋಪ್ ಎಸ್. ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ಶ್ರೀನಿವಾಸ್, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಮೊಹರಮ್ ಮೊಹಿಸಿನ್, ಆಯುಕ್ತ ಡಾ. ಎಚ್.ಎನ್. ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಭಾರತಿ.ಡಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.


