ರಸ್ತೆ ಅಪಘಾತ ಸಂಭವಿಸಿದಾಗ ತುರ್ತಾಗಿ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡುವ ‘ರಕ್ಷಾ ಕ್ಯೂಆರ್ ಕೋಡ್’ ಅನ್ನು ಹೈವೇ ಡಿಲೈಟ್ ಸಂಸ್ಥೆ ಮಂಗಳವಾರ ಬಿಡುಗಡೆಗೊಳಿಸಿದೆ.
ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ರಾಜೇಶ್ ಘಟನಟ್ಟಿ, ‘ದೇಶದಲ್ಲಿ ಪ್ರತಿನಿತ್ಯ ನೂರಾರು ಅಪಘಾತಗಳು ಸಂಭವಿಸುತ್ತವೆ. ಅಪಘಾತಕ್ಕೆ ಒಳಗಾದವರ ನೆರವಿಗಾಗಿ ರಕ್ಷಾ ಕ್ಯೂಆರ್ ಕೋಡ್ ಅಭಿವೃದ್ಧಿ ಪಡಿಸಲಾಗಿದೆ ಎಂದರು.


