ಯಾದಗಿರಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹುಣಸಗಿ ತಾಲೂಕಿನ ನಾರಾಯಣಪುರ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಬಸವಸಾಗರ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ.
ಈ ಹಿನ್ನೆಲೆ ಡ್ಯಾಂನಿಂದ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕೃಷ್ಣಾ ನದಿ ಪಾತ್ರದ ಜನರು ಎಚ್ಚರದಿಂದ ಇರುವಂತೆ ಯಾದಗಿರಿ ಜಿಲ್ಲಾಡಳಿತ ಸೂಚನೆ ನೀಡಿದೆ. ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಪೊಲೀಸರು ಸೂಚಿಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


