ಬೆಂಗಳೂರು: ನ.1 ರಂದು ಕಡ್ಡಾಯವಾಗಿ ಎಲ್ಲಾ ಕಂಪನಿ, ಕಚೇರಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ಬಾವುಟ ಹಾರಿಸದ ಕಂಪನಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತದೆ, ಕನ್ನಡ ಪರ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಂಡರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜ್ಯೋತ್ಸವ ಆಚರಣೆ ಮಾಡದೇ ಇರುವ ಸಂಸ್ಥೆಗಳ ವಿರುದ್ಧ ಸರ್ಕಾರವೇ ಕ್ರಮ ಕೈಗೊಳ್ಳಲಿದೆ, ಕನ್ನಡ ಪರ ಸಂಘಟನೆಗಳು ಗಲಾಟೆ ಮಾಡಿ ಬೆದರಿಕೆ ಹಾಕಬಾರದು ಎಂದರು.
ಈ ಬಾರಿ 50 ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತಿದೆ.ನವೆಂಬರ್ 1 ರಂದು ಎಲ್ಲಾ ಶಾಲಾ ಕಾಲೇಜುಗಳು, ಎಲ್ಲಾ ಕಂಪನಿ, ಕಾರ್ಖಾನೆಗಳಲ್ಲಿ ಕನ್ನಡ ಬಾವುಟ ಹಾರಿಸಬೇಕು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296