nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮ ಬೌದ್ಧ, ಜಾತಿ ಹೊಲಯ ಎಂದು ಬರೆಸಿ: ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ಕರೆ
    ಜಿಲ್ಲಾ ಸುದ್ದಿ September 21, 2025

    ಧರ್ಮ ಬೌದ್ಧ, ಜಾತಿ ಹೊಲಯ ಎಂದು ಬರೆಸಿ: ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ಕರೆ

    By adminSeptember 21, 2025No Comments3 Mins Read
    sargur

    ಸರಗೂರು:  ರಾಜ್ಯ ಸರಕಾರ ಸೆ.22 ರಿಂದ ಅ.7 ರವರೆಗೆ ನಡೆಸಲಿರುವ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಅಭಿಮಾನಿ ಹಾಗೂ ಅನುಯಾಯಿಗಳು ಧರ್ಮದ ಕಲಂನಲ್ಲಿ ಬೌದ್ಧ ಹಾಗೂ ಜಾತಿ ಕಾಲಂನಲ್ಲಿ ಹೊಲಯ ಎಂದು ಬರೆಸುವಂತೆ ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ವಿನಂತಿಸಿದರು.

    ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮುದಾಯದ ಭವನದಲ್ಲಿ ಭಾನುವಾರದಂದು ಬಲಗೈ ಸಮಾಜದ ಪರಿಶಿಷ್ಟ ಜಾತಿ ಪೂರ್ವಭಾವಿ ಸಭೆಯಲ್ಲಿ ಧರ್ಮದಲ್ಲಿ ಬೌದ್ಧ ಎಂದು ನಮೋದಿಸಿ ಹಾಗೂ ಅ.14 ರಂದು ಬೌದ್ಧ ಸಮ್ಮೇಳನ ಕುರಿತು ಮಾತನಾಡಿದರು.


    Provided by
    Provided by

    ಪರಿಶಿಷ್ಟ ಜಾತಿಯವರು ಬೌದ್ಧ ಎಂದು ಬರೆಸಿದಲ್ಲಿ ಕೇಂದ್ರ ಸರಕಾರದ ಆದೇಶದಂತೆ ಮೀಸಲಾತಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈ ಬಗ್ಗೆ ದಲಿತಪರ ಸಂಘಟನೆಗಳು ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ಮಾಡಿ ಸಮೀಕ್ಷೆಯ ಕಲಂ 8 ರಲ್ಲಿನ 6ನೇ ಕ್ರಮ ಸಂಖ್ಯೆಯಲ್ಲಿ ಬೌದ್ಧ ಎಂದು ತಪ್ಪದೇ ಬರೆಸಲು ಮಾರ್ಗದರ್ಶನ ಮಾಡಬೇಕು ಎಂದು ತಿಳಿಸಿದರು.

    ಇದೇ‌ ತಿಂಗಳ 22 ರಿಂದ ಸಮೀಕ್ಷೆ ನಡೆಸಲಾಗುತ್ತಿದ್ದು, ಅಂಬೇಡ್ಕರ್ ಅವರ ಅನುಯಾಯಿಗಳಾದ ನಾವು ಅಂಬೇಡ್ಕರ್ ಅವರು ಹಿಂದೂ ಧರ್ಮ ತ್ಯಜಿಸಿ ನಮ್ಮ ಮೂಲ ಧರ್ಮವಾದ ಬೌದ್ಧ ಧರ್ಮ ಅಪ್ಪಿಕೊಂಡರು. ಹಾಗಾಗಿ ಅವರ ಮಾರ್ಗದಲ್ಲಿ ನಾವೆಲ್ಲರೂ ಸಾಗುತ್ತಾ ಅಂಬೇಡ್ಕರ್ ಆಶಯದಂತೆ ನಮ್ಮ ಧರ್ಮಕ್ಕೆ ಮರಳಿ ಹೋಗಬೇಕಿದೆ. ಈ ಹಿಂದೆ ನಡೆದ ಸಮೀಕ್ಷೆಯಲ್ಲಿ ಗೊಂದಲ ಉಂಟಾಗಿತ್ತು. ಜಾಗೃತಿ ಮೂಡಿಸುವಲ್ಲಿ ವಿಫಲರಾದೆವು. ಈಗಿನ ಸಮೀಕ್ಷೆಯಲ್ಲಿ ಧರ್ಮದ ಕಾಲಂ 6ರಲ್ಲಿ ಬೌದ್ಧ ಧರ್ಮ ಎಂದು ಜಾತಿಯ ಕಾಲಂನಲ್ಲಿ ಹೊಲಯ ಎಂದು ದಾಖಲಿಸಬೇಕು.

    ಮೈಸೂರು ನಗರ ಪಾಲಿಕೆ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ಈ ಹಿಂದೆ ನಡೆದ ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ನಮಗೆ ಅನ್ಯಾಯವಾಗಿದೆ. ಅತಿ ಹೆಚ್ಚಾಗಿ ರಾಜ್ಯದಲ್ಲಿ ಬಲಗೈ ಸಮುದಾಯ ವಾಸಿಸುತ್ತಿದೆ. ಪಟ್ಟಣ ಪ್ರದೇಶದಲ್ಲಿ ವಾಸಿಸುವ ಜನರು ತಮ್ಮ ಜಾತಿ ಹೇಳಲು ಹಿಂಜರಿದ ಪರಿಣಾಮ ದಾಖಲೆಯಲ್ಲಿ ಬಲಗೈ ಸಮುದಾಯದ ಜನಸಂಖ್ಯೆ ಕಡಿಮೆ ಬಂದಿದೆ. ಈ ಸಮೀಕ್ಷೆಯಲ್ಲಿ ಹಾಗೆ ಆಗಬಾರದು. ಈ ಹಿಂದೆ ಹಿಂದೂ ಧರ್ಮ ಎಂದು ಬರೆಸಿದ್ದರು, ಹಿಂದೂ ಪದವನ್ನು ಬದಲಾಯಿಸಿ ಇನ್ನು ಮುಂದೆ ಸಮೀಕ್ಷೆಯಲ್ಲಿ ಜನರು ಧರ್ಮದ ಕಾಲಂನಲ್ಲಿ ಬೌದ್ಧ ಧರ್ಮ ಎಂದು ಬರೆಸಬೇಕು. ಧರ್ಮದ ಕಾಲಂನಲ್ಲಿ ಬೌದ್ಧ ಧರ್ಮ ಎಂದು ಬರೆಸಿದರೆ ಯಾವುದೇ ತೊಂದರೆಗಳು ಆಗುವುದಿಲ್ಲ, ಸರ್ಕಾರದಿಂದ ಸಿಗುವ ಸೌಲಭ್ಯಗಳು ಮತ್ತು ಮೀಸಲಾತಿ ಮುಂದುವರೆಯುತ್ತದೆ ಎಂದು ಹೇಳಿದರು.

    ಎಚ್.ಡಿ.ಕೋಟೆ ಮತ್ತು ಸರಗೂರು ಮಹಾಸಭಾದ ಅಧ್ಯಕ್ಷರು ಹೈರಿಗೆ ಶಿವರಾಜು ಹಾಗೂ ಇಟ್ನ ರಾಜಣ್ಣ ಮಾತನಾಡಿ ಇದೇ 22ರಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಹಿಂದುಳಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬುದ್ಧನ ಅನುಯಾಯಿಗಳು ಜಾತಿ ಕಾಲಂನಲ್ಲಿ ಬೌದ್ಧ ಎಂದೇ ಬರಯಿಸುವಂತೆ  ಮನವಿ ಮಾಡಿಕೊಂಡಿದೆ.

    ಅವರು, ಅಸ್ಪೃಶ್ಯತೆ, ಅಪಮಾನಗಳನ್ನು ಎದುರಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆ‌ರ್.ಅಂಬೇಡ್ಕರ್ ಅವರು, ಲಕ್ಷಾಂತರ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ್ದರು. ಆ ಪ್ರಕಾರವೇ ಸಂವಿಧಾನದಲ್ಲಿಯೂ ಮೂಲ ಧರ್ಮಕ್ಕೆ ಮರಳಲು ಅವಕಾಶ ಇದೆ. ಪರಿಶಿಷ್ಟ ಜಾತಿಯಲ್ಲಿಯೇ ಮುಂದುವರಿಯಲು ಬಯಸುವವರು ಧರ್ಮದ ಕಾಲಂನಲ್ಲಿ ಬೌದ್ಧ ಎಂದು ಬರೆಯಿಸಿ ಎನ್ನುವ ಅವಕಾಶವನ್ನು ಜಾತಿ ಕಾಲಂನಲ್ಲಿ ಪರಿಶಿಷ್ಟ ಜಾತಿಯೆಂದು ಉಲ್ಲೇಖಿಸಿ ಉಪಜಾತಿ ಕಾಲಂನಲ್ಲಿ ಮೂಲ ಜಾತಿ ನಮೂದಿಸಲು ಅವಕಾಶ ಇದೆ ಎಂದು ವಿವರಿಸಿದರು.

    ಅಂಬೇಡ್ಕರ್ ಚಿಂತಕ ಮಲ್ಕುಂಡಿ ಮಹದೇವಸ್ವಾಮಿ ಮಾತನಾಡಿ, ಒಂದು ವೇಳೆ ಪೂರ್ಣ ಪ್ರಮಾಣದಲ್ಲಿ ಬೌದ್ದರೆಂದು ಘೋಷಣೆ ಮಾಡುಕೊಳ್ಳಲು ಇಚ್ಛಿಸುವವರು, ಧರ್ಮದ ಕಾಲಂ ಮತ್ತು ಜಾತಿ ಕಾಲಂನಲ್ಲಿಯೂ ಬೌದ್ಧ ಎಂದೇ ನಮೂದಿಸಬಹುದು. ಈ ಮೂಲಕ ಧಾರ್ಮಿಕ ಸ್ವಾತಂತ್ರ್ಯವನ್ನು ಬಳಸಿಕೊಂಡು ಶಿಕ್ಷಣ, ಉದ್ಯೋಗ, ರಾಜಕೀಯ ಮೀಸಲಾತಿ ಹಕ್ಕುಗಳನ್ನು ಪಡೆಯಬಹುದಾಗಿದೆ. ಜಾತಿ, ಅಸ್ಪೃಶ್ಯತೆಯ ಕರಾಳತೆಯಿಂದ ಮುಕ್ತರಾಗಿ, ಗೌರವಯುತ ಬದುಕು ಕಟ್ಟಿಕೊಳ್ಳಲು ಅವಕಾಶ ಲಭ್ಯವಾಗಲಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ  ಅಂತರಸಂತೆ ಬುದ್ಧ ವಿಹಾರ ಗೌತಮ ಬಂತೇಜಿ, ಪುರಸಭೆ ಸದಸ್ಯರು ಎಚ್ ಸಿ ನರಸಿಂಹಮೂರ್ತಿ, ನಂಜಪ್ಪ, ತುಂಬಲ ರಾಮಣ್ಣ, ಮಹಾಸಭಾ ಕಾರ್ಯದರ್ಶಿ ಭೀಮನಹಳ್ಳಿ ಸೋಮೇಶ್,ಮಾಜಿ ಅಧ್ಯಕ್ಷರು ಶಿವಣ್ಣ, ಮುದ್ದಮಲ್ಲಯ್ಯ, ಸೊಗಳ್ಳಿ ಶಿವಣ್ಣ, ಪುಟ್ಟಯ್ಯ, ಬಸವರಾಜು, ಸದಾಶಿವ, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಸಣ್ಣಸ್ವಾಮಿ, ದಸಂಸ ಅಂಬೇಡ್ಕರ್ ವಾದ ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು, ಅನುಷಾ, ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ನಾಗರಾಜ್, ಕಾಡು ಮನೆ ಪ್ರಸನ್ನ, ಚನ್ನೀಪುರ ಮಲ್ಲೇಶ್, ತುಂಬಸೋಗೆ ನಾಗಣ್ಣ, ಅಣ್ಣಯ್ಯ ಸ್ವಾಮಿ, ಹುನಗಹಳ್ಳಿ ಗೋವಿಂದ, ಮಲ್ಲೇಶ್, ರಮೇಶ್, ಚೌಡಹಳ್ಳಿ ಜವರಯ್ಯ, ಮೂರ್ತಿ, ಗೋಪಾಲ್, ಚಿಕ್ಕದೇವ, ರವಿನೆನಪು, ಈಶ್ವರ್, ಜಿವಿಕ ಉಮೇಶ್, ಎಂ.ಡಿ.ಮಂಚಯ್ಯ,ಚನ್ನ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ಅ 14 ಮತ್ತು 15 ರಂದು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆಯಲಿರುವ ಬೌದ್ಧ ಮಹಾ ಸಮ್ಮೇಳನ ಕಾರ್ಯಕ್ರಮಕ್ಕೆ ಮಲೇಷಿಯಾ, ಶ್ರೀಲಂಕಾ, ನೇಪಾಳ, ಇನ್ನೂ ಮುಂತಾದ ರಾಷ್ಟ್ರಗಳಿಂದ ಬಂತೇಜಿಯವರು ಸಮಾವೇಶಕ್ಕೆ ಭಾಗವಹಿಸುತ್ತಿದ್ದಾರೆ. ರಾಜ್ಯ ಸರ್ಕಾರದ ನಮ್ಮ ಸಮಾಜದ ಸಚಿವರಾದ ಪ್ರಿಯಾಂಕಾ ಖರ್ಗೆ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಇನ್ನೂ ಮುಖಂಡರು ಸಮ್ಮೇಳನ ಮಾಡಬೇಕು ಎಂದು ಹೇಳಿ ಚರ್ಚೆ ಮಾಡಲಾಗಿದೆ. ತಾಲ್ಲೂಕಿನ ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬ ಸಮೇತರಾಗಿ ಭಾಗವಹಿಸಬೇಕು ಎಂದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಮಧುಗಿರಿ/ದೊಡ್ಡೇರಿ: ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ ಎಂದು ಪರಿಷತ್ ಸದಸ್ಯ ಆರ್ ರಾಜೇಂದ್ರ ರಾಜಣ್ಣ ತಿಳಿಸಿದರು. ಮಧುಗಿರಿ ತಾಲ್ಲೂಕಿನ…

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.