nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಶವಂತಪುರದ 5 ಸೇರಿ ಕಸ ವಿಲೇವಾರಿ ಘಟಕಗಳ ಸ್ಥಳಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್
    ರಾಜ್ಯ ಸುದ್ದಿ October 11, 2023

    ಯಶವಂತಪುರದ 5 ಸೇರಿ ಕಸ ವಿಲೇವಾರಿ ಘಟಕಗಳ ಸ್ಥಳಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್

    By adminOctober 11, 2023No Comments3 Mins Read
    d k shivakumar

    ಬೆಂಗಳೂರು: “ಜನ ಸಾಮಾನ್ಯರ ತೊಂದರೆ ನಿವಾರಣೆಗೆ ಯಶವಂತಪುರ ವಿಧಾನಸಭೆ ಕ್ಷೇತ್ರ 5, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು ಬೆಂಗಳೂರಿನ ಹೊರಭಾಗದಲ್ಲಿ ಜನರಹಿತ ಬೆಟ್ಟ ಗುಡ್ಡ ಪ್ರದೇಶಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

    ಕಂದಾಯ ಹಾಗೂ ಅರಣ್ಯ ಇಲಾಖೆಗಳ ಜತೆ ಚರ್ಚಿಸಿ, ಪರ್ಯಾಯ ಜಾಗಗಳನ್ನು ಗುರುತಿಸಲಾಗುತ್ತಿದೆ ಎಂದೂ ಅವರು ತಿಳಿಸಿದರು.


    Provided by
    Provided by

    ವಿಧಾನಸೌಧದಲ್ಲಿ ಜಲಸಂಪನ್ಮೂಲ, ಅರಣ್ಯ ಇಲಾಖೆ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಸಮನ್ವಯ ಸಭೆ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಅವರು ಮಂಗಳವಾರ ಮಾತನಾಡಿದರು.

    “ಬೆಂಗಳೂರು ಅಪಾರವಾಗಿ ಬೆಳದ ಪರಿಣಾಮ ಕಸವಿಲೇವಾರಿ ಘಟಕಗಳು ನಗರದ ಹೃದಯ ಭಾಗಕ್ಕೆ ಬಂದಿವೆ. ಈ ಘಟಕಗಳ ಸುತ್ತಮುತ್ತ ನಾಲ್ಕೈದು ಕಿ.ಮೀ. ವರೆಗೆ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಬ್ಯಾಟರಾಯಣಪುರ ಶಾಸಕ, ಸಚಿವ ಕೃಷ್ಣಬೈರೇಗೌಡ, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತಿತರರು ಅವರು ಕಸ ವಿಲೇವಾರಿ ಘಟಕ ಸ್ಥಳಾಂತರದ ವಿಚಾರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ನಾನು ಕೂಡ ಖುದ್ದು ಸ್ಥಳ ಪರಿಶೀಲನೆ ನಡೆಸಿದ್ದೆ. ಮುಂದಿನ ದಿನಗಳಲ್ಲಿ ಜನರಿಗೆ ಕಸದ ವಾಸನೆ ಬರಬಾರದು ಎಂಬ ಉದ್ದೇಶದಿಂದ ನಗರದ ಹೊರವಲಯಕ್ಕೆ ಈ ಘಟಕಗಳ ಸ್ಥಳಾಂತರಕ್ಕೆ ನಿರ್ಧರಿಸಿದ್ದೇವೆ” ಎಂದು ತಿಳಿಸಿದರು.

    “ಇದಕ್ಕಾಗಿ ನಗರದ ನಾಲ್ಕೂ ಮೂಲೆಗಳಲ್ಲಿ ಅರಣ್ಯ ಪ್ರದೇಶದ ಗಡಿ ಭಾಗಗಳಲ್ಲಿ 100 ಎಕರೆ ಜಾಗ ನೀಡಿ ಎಂದು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಮನವಿ ಮಾಡಿದ್ದು, ಸರ್ವೇ ಮಾಡಿದ ಬಳಿಕ ಜಾಗ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ನಾವು ಅರಣ್ಯ ಇಲಾಖೆಗೆ ಪರ್ಯಾಯ ಜಾಗ ನೀಡುತ್ತೇವೆ. ಅಥವಾ ಖರೀದಿ ಮಾಡುತ್ತೇವೆ ಎಂದು ತಿಳಿಸಿದರು.

    ತಿಪ್ಪಗೊಂಡನಹಳ್ಳಿ ಬಫರ್ ಜೋನ್ ಪುನರ್ ನಿಗದಿ:
    “ತಿಪ್ಪಗೊಂಡನಹಳ್ಳಿ ನೀರು ಸ್ವಚ್ಛತೆ ಕಾಪಾಡಲು ನಾವು ಆ ಭಾಗದ ಶಾಸಕರ ಜೊತೆ ಚರ್ಚೆ ಮಾಡಿದ್ದೇವೆ. ಮುಂದಿನ ಒಂದೂವರೆ ವರ್ಷಗಳಲ್ಲಿ ನೀರನ್ನು ತರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಈ ನೀರಿಗೆ ಯಾವುದೇ ಕೊಳಚೆ ನೀರು ಸೇರದಂತೆ ನೋಡಿಕೊಳ್ಳಬೇಕು. ಇಲ್ಲಿನ ಬಫರ್ ಜೋನ್ ಅಂತರ ಕಡಿಮೆ ವಿಚಾರವಾಗಿ 2017ರಲ್ಲಿ ಹಾಗೂ 2021ರಲ್ಲಿ ಸರ್ಕಾರ ಆದೇಶವಾಗಿದ್ದರೂ ನಗರಾಭಿವೃದ್ಧಿ ಇಲಾಖೆ ಮೂಲಕ ಜಾರಿ ಆಗದೆ ಯಾರಿಗೂ ಪ್ಲಾನ್ ಸ್ಯಾಂಕ್ಷನ್ ಮಾಡುತ್ತಿಲ್ಲ. ಇದರಿಂದಾಗಿ ಕಾನೂನು ಬಾಹೀರವಾಗಿ ಮನೆ, ಕಟ್ಟಡಗಳ ನಿರ್ಮಾಣವಾಗಿದೆ. ಈ ಭಾಗದಲ್ಲಿ ಕಟ್ಟುನಿಟ್ಟಾಗಿ ಕಾನೂನು ಜಾರಿ ಮೂಲಕ ನಿರ್ಮಾಣಕ್ಕೆ ಅವಕಾಶ ನೀಡಲಾಗುವುದು” ಎಂದು ತಿಳಿಸಿದರು.

    “ನೆಲಮಂಗಲ, ಡಾಬಸ್ ಪೇಟೆ, ಶಿವಗಂಗೆ ಸೇರಿದಂತೆ ಅನೇಕ ಕಡೆಗಳಲ್ಲಿ ಪ್ಲಾನ್ ಗಳಿಗೆ ಅನುಮತಿ ನೀಡುತ್ತಿಲ್ಲ ಎಂದು ಜನ ಗಲಾಟೆ ಮಾಡುತ್ತಿದ್ದಾರೆ. ಕಳೆದ ಸರ್ಕಾರ ತಂದಿರುವ ಕಾನೂನನ್ನೇ ಜಾರಿ ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದು, ನಗರಾಭಿವೃದ್ಧಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕಾನೂನು ತಂಡ ಒಟ್ಟಾಗಿ ಕೂತು ಚರ್ಚೆ ಮಾಡಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲಾಗುವುದು” ಎಂದರು.

    “ತಿಪ್ಪಗೊಂಡನಹಳ್ಳಿಯಲ್ಲಿ 300 ಎಕರೆ ಹಾಗೂ ಹೆಸರಘಟ್ಟದಲ್ಲಿ 100 ಎಕರೆ ಜಮೀನು ಇದ್ದು, ಇಲ್ಲಿ ಬಿಡಬ್ಲ್ಯೂಎಸ್ಎಸ್ ಬಿಗೆ ಸ್ವಂತ ಸೌರ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣಕ್ಕೆ ಚಿಂತನೆ ನಡೆಸಿದ್ದೇವೆ. ಇವರು ಈಗ ಯುನಿಟ್ ಗೆ 6 ರೂ.ನಂತೆ ಸಾವಿರ ಕೋಟಿಯಷ್ಟು ಬಿಲ್ ಕಟ್ಟುತ್ತಿದ್ದಾರೆ. ಸೌರ ವಿದ್ಯುತ್ ಘಟಕದಿಂದ ಯುನಿಟ್ ಗೆ 4 ರೂ.ನಂತೆ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಬಹುದು. ಇದರಿಂದ ನಮ್ಮ ಜಮೀನನ್ನು ಒತ್ತುವರಿಯಿಂದ ಕಾಪಾಡಿಕೊಳ್ಳಬಹುದು, ಸೌರ ವಿದ್ಯುತ್ ಕೂಡ ಉತ್ಪಾದಿಸಬಹುದು. ಈ ವಿಷಯವನ್ನು ಮಾಲೀನ್ಯ ನಿಯಂತ್ರಣ ಮಂಡಳಿಗೆ ತಿಳಿಸಿದ್ದು, ಪರಿಶೀಲನೆ ಮಾಡಲಿದೆ” ಎಂದು ತಿಳಿಸಿದರು.

    ಮೇಕೆದಾಟು ಯೋಜನೆಗೆ ಪರ್ಯಾಯ ಜಾಗ:

    “ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಈ ಭಾಗದ ಜನರಿಗೆ ಪರ್ಯಾಯ ಜಾಗಗಳನ್ನು ಗುರುತಿಸಲಾಗಿದೆ. ಚಾಮರಾಜನಗರ, ಮಂಡ್ಯ, ರಾಮನಗರದಲ್ಲಿ ಜಾಗ ಗುರುತಿಸಲಾಗಿದ್ದು, ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದೇವೆ.” ಎಂದು ತಿಳಿಸಿದರು.

    “ಇನ್ನು ಬಿಎಂಆರ್ ಡಿ ಯೋಜನೆಗಳಿಗೆ ಸಂಬಂಧಿಸಿದಂತೆ ನಮಗೂ ಹಾಗೂ ಅರಣ್ಯ ಇಲಾಖೆ ನಡುವಣ ಸಮಸ್ಯೆಗಳನ್ನು ಚರ್ಚೆ ಮಾಡಿದ್ದೇವೆ. ಕಾವೇರಿ ನೀರಿನ‌ ಪೈಪ್ ಲೈನ್ 100 ಮೀಟರ್ ಅರಣ್ಯ ಜಾಗದಲ್ಲಿ ಬರುತ್ತಿದ್ದು, ಅದಕ್ಕೆ ಅರಣ್ಯ ಅವಕಾಶ ನೀಡುತ್ತಿಲ್ಲ. ಹೀಗಾಗಿ ಈ ಯೋಜನೆ ತಡೆಹಿಡಿಯಲಾಗಿದೆ. ಕಾಮಗಾರಿಗೆ ಅವಕಾಶ ನೀಡಿ ಇದಕ್ಕೆ ಪರ್ಯಾಯ ಜಾಗ ನೀಡುವುದಾಗಿ ತಿಳಿಸಲಾಗಿದೆ. ಬೆಂಗಳೂರಿನ ಸುತ್ತಮುತ್ತಲಲ್ಲಿ ಆನೆ ಮತ್ತು ಚಿರತೆ ದಾಳಿಗಳು ಹೆಚ್ಚಾಗುತ್ತಿವೆ. ಈ ವಿಚಾರವನ್ನು ಸಚಿವರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ” ಎಂದು ತಿಳಿಸಿದರು.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ತುಮಕೂರು: ನಗರದ ಕನ್ನಡ ಭವನದಲ್ಲಿ ಕನ್ನಡ ಪರ ಸಂಘಟನೆಯಾದ ವಿಜಯ ಸೇನೆ ವತಿಯಿಂದ ಆಯೋಜಿಸಲಾಗಿದ್ದ ವೀರ ರಾಣಿ ಬೆಳವಾಡಿ ಮಲ್ಲಮ್ಮ…

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.