nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ

    October 4, 2026

    ಮಧುಗಿರಿ: ಅಕ್ರಮ ಮದ್ಯ ಮಾರಾಟ – ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ಮದ್ಯ ಜಪ್ತಿ!

    October 4, 2026

    ಉಪ್ಪಿಟ್ಟು ರವೆ, ಇಡ್ಲಿ ರವೆ ಒಂದೇ ಅಲ್ಲ! ಎರಡರ ನಡುವಿನ ವ್ಯತ್ಯಾಸವೇನು ಗೊತ್ತಾ?

    October 4, 2026
    Facebook Twitter Instagram
    ಟ್ರೆಂಡಿಂಗ್
    • ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ
    • ಮಧುಗಿರಿ: ಅಕ್ರಮ ಮದ್ಯ ಮಾರಾಟ – ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ಮದ್ಯ ಜಪ್ತಿ!
    • ಉಪ್ಪಿಟ್ಟು ರವೆ, ಇಡ್ಲಿ ರವೆ ಒಂದೇ ಅಲ್ಲ! ಎರಡರ ನಡುವಿನ ವ್ಯತ್ಯಾಸವೇನು ಗೊತ್ತಾ?
    • ಶಿವನ ಕೊರಳಿನಿಂದ ಬುದ್ಧನ ಧ್ಯಾನದವರೆಗೆ ನಾಗರಹಾವಿನ ನಂಟೇಕೆ? ಹಿಂದೂ, ಬೌದ್ಧ, ಜೈನ ಧರ್ಮಗಳಲ್ಲಿರುವ ನಿಗೂಢ ನಂಬಿಕೆಯ ಕಥೆ ಇಲ್ಲಿದೆ!
    • ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!
    • ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!
    • ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ
    ತುಮಕೂರು October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    By Ganesh TumkuruOctober 3, 2026No Comments2 Mins Read
    m b patil

    ಬೆಂಗಳೂರು: 2025ರಲ್ಲಿ ನಡೆದಿದ್ದ ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಘೋಷಿಸಿದ್ದಂತೆ ಭಾರತ–ಅಮೆರಿಕ ಪಾಲುದಾರಿಕೆಯಲ್ಲಿರುವ ರೆನೈಸ್ಸಾನ್ಸ್ ಸೋಲಾರ್ ಅಂಡ್ ಎಲೆಕ್ಟ್ರಾನಿಕ್ ಮೆಟೀರಿಯಲ್ ಕಂಪನಿಯು ತುಮಕೂರಿನ ಚೆನ್ನೈ — ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ (ಸಿಬಿಐಸಿ) ಪ್ರದೇಶದಲ್ಲಿ 5,000 ಕೋಟಿ ರೂಪಾಯಿ ಬಂಡವಾಳ ಹೂಡಲು ಆಸಕ್ತಿ ತೋರಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

    ಇಲ್ಲಿನ ಖನಿಜ ಭವನದಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ರೆನೈಸ್ಸಾನ್ಸ್ ಕಂಪನಿಯ ಅಧ್ಯಕ್ಷ ಹಾಗೂ ಸಿಇಒ ಡಾ.ಮಿಲಿಂದ್ ಎಸ್.ಕುಲಕರ್ಣಿ ಜೊತೆ ಅವರು ಸುದೀರ್ಘ ಮಾತುಕತೆ ನಡೆಸಿದರು.

    ಈ ಬಗ್ಗೆ ಮಾತನಾಡಿರುವ ಅವರು, ಕಂಪನಿಯು ಸೋಲಾರ್ ಕ್ಷೇತ್ರದಲ್ಲಿ ಸಿಂಗಲ್ ಕ್ರಿಸ್ಟಲ್ ಸಿಲಿಕಾನ್ ಮತ್ತು ವೇಫರ್ ತಯಾರಿಕೆಯಲ್ಲಿ ಹೆಸರು ಮಾಡಿದೆ. ಅದು ಸಿಬಿಐಸಿ ಪ್ರದೇಶದಲ್ಲಿ 5 ಗಿಗಾವಾಟ್ ಸಾಮರ್ಥ್ಯದ ಸೋಲಾರ್ ಇನ್–ಗೌಟ್ ಮತ್ತು ವೇಫರ್ ತಯಾರಿಕೆ ಘಟಕ ಸ್ಥಾಪಿಸಲು 100 ಎಕರೆ ಜಾಗ ಕೇಳಿದೆ. ಕಂಪನಿಯ ಉಳಿದ ಬೇಡಿಕೆಗಳನ್ನು ಕುರಿತು ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದಿದ್ದಾರೆ.

    ರೆನೈಸ್ಸಾನ್ಸ್ ಕಂಪನಿಯು ತಂತ್ರಜ್ಞರೆ ಸೇರಿಕೊಂಡು ಆರಂಭಿಸಿರುವ ಉದ್ಯಮವಾಗಿದ್ದು, ಚೆನ್ನೈನಲ್ಲಿ ತನ್ನ ಪ್ರಧಾನ ಕಚೇರಿಯನ್ನು ಹೊಂದಿದೆ. ಉದ್ದೇಶಿತ ಸ್ಥಾವರಕ್ಕೆ ಅದು 80 ಮೆಗಾವಾಟ್ ವಿದ್ಯುತ್ ಮತ್ತು 1 ಕೋಟಿ ಎಂಎಲ್ ಡಿ ನೀರು ಬೇಕಾಗುತ್ತದೆ ಎಂಬ ಎರಡು ಪ್ರಮುಖ ಅಗತ್ಯಗಳನ್ನು ನಮ್ಮ ಗಮನಕ್ಕೆ ತರಲಾಗಿದೆ. ಇವುಗಳನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುವುದು.

    ಎಲ್ಲವೂ ನಿರೀಕ್ಷೆಯಂತೆ ನಡೆದರೆ 2028ರ ಮಧ್ಯ ಭಾಗದ ವೇಳೆಗೆ ಕಂಪನಿಯು ತನ್ನ ತಯಾರಿಕಾ ಚಟುವಟಿಕೆ ಆರಂಭಿಸಲಿದೆ ಎಂದು ಅವರು ತಿಳಿಸಿದ್ದಾರೆ. ಕಂಪನಿಯು ರಾಜ್ಯ ಸರ್ಕಾರದ ಕಡೆಯಿಂದ ವಿಶೇಷ ಪ್ರೋತ್ಸಾಹ ಭತ್ಯೆಗೂ ಮನವಿ ಮಾಡಿಕೊಂಡಿದೆ. ಈ ಕುರಿತು ಉನ್ನತ ಮಟ್ಟದಲ್ಲಿ ಚರ್ಚೆ ಪ್ರಗತಿಯಲ್ಲಿದೆ ಎಂದು ಪಾಟೀಲ ನುಡಿದಿದ್ದಾರೆ.

    ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತ ಮುಷ್ಟು ಗೋಯಲ್ ಹಾಗೂ ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?

    October 3, 2026

    ಮಾಸಿಕ ಗೌರವಧನ: ಆನ್ ಲೈನ್  ಅರ್ಜಿ ಆಹ್ವಾನ

    October 2, 2026

    Leave A Reply Cancel Reply

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ

    October 4, 2026

    ಮಿಡಿಗೇಶಿ: ಗ್ರಾಮಾಂತರ ಮಕ್ಕಳಿಗೆ, ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಕುಟುಂಬಗಳನ್ನು ಉದ್ಧರಿಸುವ ಮಹತ್ವದ ಗುರಿಯನ್ನು…

    ಮಧುಗಿರಿ: ಅಕ್ರಮ ಮದ್ಯ ಮಾರಾಟ – ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ಮದ್ಯ ಜಪ್ತಿ!

    October 4, 2026

    ಉಪ್ಪಿಟ್ಟು ರವೆ, ಇಡ್ಲಿ ರವೆ ಒಂದೇ ಅಲ್ಲ! ಎರಡರ ನಡುವಿನ ವ್ಯತ್ಯಾಸವೇನು ಗೊತ್ತಾ?

    October 4, 2026

    ಶಿವನ ಕೊರಳಿನಿಂದ ಬುದ್ಧನ ಧ್ಯಾನದವರೆಗೆ ನಾಗರಹಾವಿನ ನಂಟೇಕೆ? ಹಿಂದೂ, ಬೌದ್ಧ, ಜೈನ ಧರ್ಮಗಳಲ್ಲಿರುವ ನಿಗೂಢ ನಂಬಿಕೆಯ ಕಥೆ ಇಲ್ಲಿದೆ!

    October 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.