ಕಲಬುರ್ಗಿ: ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಇರುವಂತ ಮಿನಿ ವಿಧಾನಸೌಧಗಳ ಹೆಸರುಗಳನ್ನು ಪ್ರಜಾ ಸೌಧ ಎಂದು ಮರುನಾಮಕರಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಸರಿ ಮಾಡಿದಂತ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಗುತ್ತದೆ. ಕೂಡಲಸಂಗಮದಿಂದ ಎಲ್ಲಾ ಪ್ರವಾಸಿ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದ ತಾಲ್ಲೂಕು ಕೇಂದ್ರಗಳಲ್ಲಿ ಮಿನಿ ವಿಧಾನಸೌಧಗಳನ್ನು ನಿರ್ಮಿಸಲಾಗಿದೆ. ಇನ್ನೂ ಕೆಲವು ತಾಲ್ಲೂಕುಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಇನ್ನೂ ಕೆಲವು ಕಡೆ ಮಾಡಲಿದ್ದೇವೆ. ಇವುಗಳ ಹೆಸರನ್ನು ಮಿನಿ ವಿಧಾನಸೌಧ ಎನ್ನುವ ಬದಲಾಗಿ ಪ್ರಜಾ ಸೌಧ ಎಂಬುದಾಗಿ ಮರು ನಾಮಕರಣ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಇದೇ ವೇಳೆ ಘೋಷಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


