ತುಮಕೂರು: ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ/ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಬಾಡಿಗೆ ಕಟ್ಟಡಗಳು ಅಗತ್ಯವಿದ್ದು, ಕಟ್ಟಡವನ್ನು ಬಾಡಿಗೆಗೆ ನೀಡಲಿಚ್ಛಿಸುವ ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ.
ಕಟ್ಟಡದಲ್ಲಿ 100–125 ವಿದ್ಯಾರ್ಥಿಗಳು ವಾಸಿಸಲು ಸುಮಾರು 15 ರಿಂದ 20 ವಾಸದ ಕೊಠಡಿಗಳು, ಸ್ನಾನದ ಗೃಹ, ಶೌಚಾಲಯ, ಸ್ವಂತ ಬೋರ್ ವೆಲ್ ನೀರಿನ ವ್ಯವಸ್ಥೆ ಹಾಗೂ ಮತ್ತಿತರ ಮೂಲಭೂತ ಸೌಕರ್ಯಗಳನ್ನೊಳಗೊಂಡಿರುವ ಕಟ್ಟಡಗಳ ಅವಶ್ಯಕತೆಯಿದೆ. ಲೋಕೋಪಯೋಗಿ ಇಲಾಖೆಯವರು ನಿಗದಿಪಡಿಸುವ ಬಾಡಿಗೆಗೆ ಒಪ್ಪುವ ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2251736ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296