ದಾವಣಗೆರೆ: ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ರೇಣುಕಾಚಾರ್ಯ ಹಾಗೂ ಅವರ ಸಹೋದರ ಸೇರಿದಂತೆ 11 ಮಂದಿಯ ವಿರುದ್ಧ ಕೆಟಿಜೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎಂ.ಪಿ ರೇಣುಕಾಚಾರ್ಯ ಅವರ ಸಹೋದರ ದ್ವಾರಕೇಶ್ವರಯ್ಯ ಸೇರಿದಂತೆ 11 ಮಂದಿಯ ವಿರುದ್ಧ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪದಡಿ, ದಲಿತ ಮುಖಂಡ ಹೆಗ್ಗೆರೆ ರಂಗಪ್ಪ ದಾವಣಗೆರೆಯ ಕೆಟಿಜೆ ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು.
ದೂರಿನನ್ವಯ ಐಪಿಸಿ ಸೆಕ್ಷನ್ 143, 147, 504, 506 ಮತ್ತು 149 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಎಂ.ಪಿ ರೇಣುಕಾಚಾರ್ಯ ಅವರ ಸಹೋದರ ದ್ವಾರಕೇಶ್ವರಯ್ಯ ಅವರು, ಬೇಡ ಜಂಗಮ ಎಂದು ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy