ದಾವಣಗೆರೆಯಲ್ಲಿ ಒಂಬತ್ತು ತಿಂಗಳ ಹಿಂದೆ ನಡೆದ ಅದೊಂದು ಘಟನೆ ರಾಜಕೀಯ ವಲಯದಲ್ಲಿ ತಲ್ಲಣ ಎಬ್ಬಿಸಿತ್ತು. ಇದು ಅಪಘಾತವೋ? ಕೊಲೆಯೋ ಅನ್ನೋ ಅನುಮಾನದಲ್ಲಿ ಮೂಡಿಸಿತ್ತು. ಆದರೆ ಸುಧೀರ್ಘ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಫೈನಲ್ ರಿಪೋರ್ಟ್ ಸಲ್ಲಿಕೆ ಮಾಡಿದೆ.
ದಾವಣಗೆರೆಯ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಿದ್ದು, ಇದು ಕೊಲೆಯಿಂದ ಸಂಭವಿಸಿರೋ ಸಾವಲ್ಲ. ಇದು ಅಪಘಾತದಿಂದ ಸಂಭವಿಸಿರೋ ಸಾವು ಎಂದು ಸಿಐಡಿ ತಮ್ಮ ವರದಿಯಲ್ಲಿ ಉಲ್ಲೇಖಿಸಿದೆ.


