ದರ್ಶನ್ ನನ್ನ ಮುಂದೆಯೇ ರೇಣುಕಾಸ್ವಾಮಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿ ಪವಿತ್ರಾಗೌಡ ಪೊಲೀಸರ ಮುಂದೆ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿದ್ದು, ಕೇಸ್ ಗೆ ಸಂಬಂಧಿಸಿಸಿದಂತೆ ಪ್ರಮುಖ ವಿಚಾರಗಳನ್ನು ತನಿಖೆ ವೇಳೆ ಬಾಯ್ಬಿಟ್ಟಿರುವುದಾಗಿ ವರದಿ ತಿಳಿಸಿದೆ.
ಸದ್ಯ 17 ಜನ ಆರೋಪಿಗಳನ್ನು ಈ ಕೇಸಿನಲ್ಲಿ ವಿಚಾರಣಾಧೀನ ಕೈದಿಗಳಾಗಿ ಜೈಲಿನಲ್ಲಿರಿಸಲಾಗಿದೆ. ಪವಿತ್ರಾ ಗೌಡ ಅವರು ಒಂದು ವಾರದಲ್ಲೇ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಈ ಮೂಲಕ ನಟ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.
ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾಸ್ವಾಮಿಯನ್ನು ಕೂಡಿಹಾಕಿದ್ದು, ನಂತರ ನಾನು ಒಂದು ಏಟು ಚಪ್ಪಲಿಯಲ್ಲಿ ಹೊಡೆದಿದ್ದು, ಅನಂತರ ನನ್ನ ಎದುರಿನಲ್ಲಿಯೇ ರೇಣುಕಾಸ್ವಾಮಿಯ ಮೇಲೆ ನಟ ದರ್ಶನ್ ಹಲ್ಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಈ ಮೂಲಕ ನಟ ದರ್ಶನ್ ವಿರುದ್ಧವಾಗಿಯೇ ನಟಿ ಪವಿತ್ರಾ ಗೌಡ ಹೇಳಿಕೆ ನೀಡಿದ್ದಾಳೆ.
ದರ್ಶನ್ ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿದ್ದು ನಿಜ, ನಾನು ಶೆಡ್ ಗೆ ಹೋಗುವುದಕ್ಕೂ ಮೊದಲೇ ದರ್ಶನ್ ಶೆಡ್ ನಲ್ಲಿದ್ದನು ಎಂದು ಪೊಲೀಸರ ಮುಂದೆ ಪವಿತ್ರಾ ಗೌಡ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


