ಬೆಂಗಳೂರು: ರೇಣುಕಾಸ್ವಾಮಿಯನ್ನು ಖೆಡ್ಡಾಕ್ಕೆ ಬೀಳಿಸಲು ಆತನ ವಿವರಗಳನ್ನು ತಿಳಿದುಕೊಳ್ಳಲು ಪವಿತ್ರಾ ಗೌಡ ಹೆಸರಿನಲ್ಲಿ ಪವನ್ ಚಾಟ್ ಮಾಡಿ ಆತನ ವಿಳಾಸ ಪತ್ತೆ ಹಚ್ಚಿದ್ದ ಎನ್ನುವ ವಿಚಾರ ಇದೀಗ ತಿಳಿದು ಬಂದಿದೆ.
ಈ ವಿಚಾರವನ್ನು ರೇಣುಕಾಸ್ವಾಮಿ ಮತ್ತು ಪವಿತ್ರಾಗೌಡ ಹಾಗೂ ಉಳಿದ ಆರೋಪಿಗಳ ಮೊಬೈಲ್ ಗಳಿಂದ ರಿಟ್ರೀವ್ ಮಾಡಿ ಎಫ್ ಎಸ್ ಎಲ್‌ನಿಂದ ಮಾಹಿತಿ ಪಡೆದುಕೊಂಡು ಚಾರ್ಜ್‌ಶೀಟ್ ನಲ್ಲಿ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.
ಪವಿತ್ರಾ ಗೌಡ ಹೆಸರಿನಲ್ಲಿ ಚಾಟ್ ಮಾಡಿದ್ದ ಪವನ್, ರೇಣುಕಾಸ್ವಾಮಿ ಕೆಲಸ ಮಾಡುತ್ತಿದ್ದ ಶಾಪ್, ಆತನ ಊರು, ವಾಸಸ್ಥಳದ ವಿಳಾಸವನ್ನು ಪತ್ತೆ ಹಚ್ಚಿದ್ದ.
ನಂತರ ರೇಣುಕಾಸ್ವಾಮಿಯನ್ನು ಅಪಹರಿಸಿ ಚಿತ್ರದುರ್ಗದಿಂದ ನಗರದ ಪಟ್ಟಣಗೆರೆ ಶೆಡ್ ಗೆ ಕರೆತಂದಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296