ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿಯಲ್ಲಿ 135 ವರ್ಷಗಳ ಹಿಂದೆ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಇತ್ತು. ಈ ಶಾಲೆ ಕಳೆದ ಕೆಲವರ್ಷಗಳಿಂದ ಮಳೆಗಾಲದಲ್ಲಿ ಸೋರಲಾರಂಭಿಸಿದೆ.
ಆದರೆ, ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಯ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೂ ಸಹ ಯಾವುದೇ ಪ್ರಯೋಜನವಾಗಿಲ್ಲ.
ಹಾಗಾಗಿ, ವಿದ್ಯಾರ್ಥಿಗಳು ತಾವು ಕಲಿತ ಶಾಲೆ ದುರಸ್ತಿಗೆ ತಾವೇ ಮುಂದೆ ಬಂದಿದ್ದಾರೆ. ಮಾಜಿ ವಿದ್ಯಾರ್ಥಿಗಳ ಸಂಘ ಕಟ್ಟಿಕೊಂಡು ಶಾಲೆಯ ದುರಸ್ತಿಗೆ ನಿಂತಿದ್ದಾರೆ.


