ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರಂಭದಿಂದಲೂ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಹಾಗೂ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡುವುದನ್ನು ಮುಂದುವರೆಸಿದ್ದು, ಅವರ ಮಾತುಗಳು ಸಂಪೂರ್ಣ ಸುಳ್ಳಿನ ಕಂತೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರ್ಥಿಕತೆ ಹಾಳು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಆದರೆ, ಯುಪಿಎ ಸರ್ಕಾರದ ಅವಧಿಯಲ್ಲಿ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಬೆಲೆ ಏರಿಕೆಯಾಗಿ ಡಬಲ್ ಅಂಕಿ ಬೆಲೆ ಏರಿಕೆ, ಸಿಂಗಲ್ ಅಂಕಿ ಆರ್ಥಿಕ ಬೆಳವಣಿಗೆಯಾಗಿತ್ತು. ಅತಿ ಹೆಚ್ಚು ಭ್ರಷ್ಟಾಚಾರ ಮಾಡಿರುವ ಆರೋಪ ಯುಪಿಎ ಸರ್ಕಾರದ ಮೇಲೆ ಇತ್ತು. ಆಕಾಶ, ಭೂಮಿ ನೀರಿನಲ್ಲಿ ಹಗರಣ ಇತ್ತು. ಎಲ್ಲೆಡೆ ಹಗರಣಗಳ ಸುರಿಮಳೆ ಇತ್ತು.
ಪ್ರಧಾನಿ ಮೋದಿಯವರು ಭ್ರಷ್ಟಾಚಾರ ರಹಿತ ಆಡಳಿತ ನೀಡಿ ಆರ್ಥಿಕತೆ ಸಧ್ಯತೆ ತಂದಿದ್ದಾರೆ. ಮೋದಿಯವರ ಕಾಲದಲ್ಲಿ ಅತಿ ಹೆಚ್ಚು ವಿದೇಶಿ ವಿನಿಮಯ ನಿಧಿ ಇದೆ. 573 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ಫಂಡ್ ಇದೆ. 543 ಬಿಲಿಯನ್ ಡಾಲರ್ ಗೋಲ್ಡ್ ನಿಧಿ ಇದೆ. ಇಡೀ ವಿಶ್ವದಲ್ಲೇ ಅತಿ ಹೆಚ್ಚು ವಿದೇಶಿ ವಿನಿಮಯ ಹೊಂದಿರುವ ದೇಶಗಳ ಸಾಲಿನಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಅತಿ ಹೆಚ್ಚು ಬಂಡವಾಳ ಭಾರತಕ್ಕೆ ಹರಿದು ಬರುತ್ತಿದೆ. ಇದು ಭಾರತದ ಆರ್ಥಿಕ ಶಕ್ತಿಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ. ಮೋದಿಯವರ ಕಾಲದಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ. ಕೋವಿಡ್ ನಿರ್ವಹಣೆಯನ್ನು ಯಶಸ್ವಿಯಾಗಿ ನಿರ್ವಹಿಸಿ 130 ಕೋಟಿ ಭಾರತಿಯರಿಗೆ ಮೂರು ಬಾರಿ ಲಸಿಕೆ ಕೊಡಿಸಿ ಆರ್ಥಿಕ ಸದೃತೆಯನ್ನು ಕಾಪಾಡಿರುವುದನ್ನು ಯಾರೂ ಮರೆಯುವಂತಿಲ್ಲ ಎಂದು ತಿಳಿಸಿದ್ದಾರೆ.
ಕೊವಿಡ್ ಸಂದರ್ಭದಲ್ಲಿ ಪ್ರತಿ ತಿಂಗಳು ಹತ್ತು ಕೆಜಿ ಅಕ್ಕಿಯನ್ನು ಉಚಿತವಾಗಿ ಮೋದಿಯವರು ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅಲ್ಲ, ರಾಹುಲ್ ಗಾಂಧಿಯಲ್ಲ. ಇದನ್ನು ನೆನಪಿಟ್ಟುಕೊಳ್ಳಬೇಕು.
ಪದೇ ಪದೇ ಸುಳ್ಳು ಹೇಳಿದರೆ ಅದು ಸತ್ಯವಾಗಲ್ಲ. ನಮ್ಮ ಸರ್ಕಾರ ಇದ್ದಾಗ ಸರ್ ಪ್ಲಸ್ ಬಜೆಟ್ ಮಂಡನೆ ಮಾಡಿದ್ದೇವು ನೀವು ಬಂದು ಮೂರೇ ತಿಂಗಳಲ್ಲಿ ಕೊರತೆ ಬಜೆಟ್ ಮಾಡಿದ್ದೀರಿ, 58 ಸಾವಿರ ಕೋಟಿ ದಲಿತರ ಹಣವನ್ನು ಗ್ಯಾರೆಂಟಿ ಯೋಜನೆಗಳನ್ನು ಕೊಟ್ಟಿದ್ದೀರಿ, ನೀರಾವರಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ, ಕೃಷಿ, ಗ್ರಾಮೀಣಾಭಿವೃದ್ಧಿ ಅಭಿವೃದ್ಧಿಗೆ ಹಣ ಮೀಸಲಿಟ್ಟಿಲ್ಲ ಅಂತ ನಾನು ಹೇಳುತ್ತಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


