ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ—ಜೆಡಿಎಸ್ ಪಾದಯಾತ್ರೆ ನಡೆಸುತ್ತಿದೆ. ಈ ನಡುವೆ ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಮುಡಾ ಹಗರಣ ಸಂಬಂಧ ರಾಜ್ಯಪಾಲರು ನೀಡಿರುವ ನೋಟಿಸ್ ಗೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಿಂದ ನನಗೆ ಬಂದಿರುವುದು ಒಂದೇ ನೋಟಿಸ್, ಆ ನೋಟಿಸ್ ಗೆ ನಾನು ಉತ್ತರ ಕೊಟ್ಟಿದ್ದೇನೆ. ಸಿಎಸ್ ರಾಜ್ಯಪಾಲರನ್ನು ಭೇಟಿಯಾಗಿರುವುದು ಬೇರೆ ವಿಚಾರಕ್ಕೆ, ಸಿಎಸ್ ಆಗಿ ನೇಮಕವಾಗಿರುವುದಕ್ಕೆ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ ಎಂದರು.
ರಾಜ್ಯಪಾಲರು ನೀಡಿರುವ ನೋಟಿಸ್ ಗೆ ನಾನು ಈಗಾಗಲೇ ಉತ್ತರ ಕೊಟ್ಟಿದ್ದೇನೆ, ಸಚಿವ ಸಂಪುಟದಿಂದ ನೋಟಿಸ್ ಗೆ ಉತ್ತರ ನೀಡಲಾಗಿದೆ. ಕಾನುನಾತ್ಮಕವಾಗಿ ರಾಜ್ಯಪಾಲರು ಉತ್ತರನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296