ಬೀದರ್: ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿ ಆವರಣದಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಗೌರವ ನಮನ ಸಲ್ಲಿಸಿ ಧ್ವಜರೋಹಣೆ ಮಾಡುವ ಮೂಲಕ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು.
1950 ಜನವರಿ 26 ರಂದು ಸಂವಿಧಾನವನ್ನು ನಮ್ಮನ್ನು ನಾವು ಅರ್ಪಿಸಿಕೊಂಡು ಅಂಗೀಕರಿಸಿ ಶಾಸನವಾಗಿ ವಿಧಿಸಿಕೊಂಡಿರುತ್ತೇವೆ. ಈ ಸವಿ ನೆನಪಿನಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು , ಸಂವಿಧಾನವು ಪ್ರಜೆಗಳಿಗೆ ಅತಿಮೂಲ್ಯವಾದ ಮೂಲಭೂತ ಹಕ್ಕುಗಳನ್ನು ನೀಡಿದ್ದು, ಅದರ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಸಂದೇಶ ನೀಡಲಾಯಿತು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx