ತುಮಕೂರು: ಜಿಲ್ಲಾಡಳಿತದ ವತಿಯಿಂದ ಜನವರಿ 26ರಂದು ಬೆಳಿಗ್ಗೆ 9 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ “ಗಣರಾಜ್ಯೋತ್ಸವ ದಿನಾಚರಣೆ–2025” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರ ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸುವರು.
ನಗರ ವಿಧಾನಸಭಾ ಕ್ಷೇತ್ರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸುವರು.
ಅಂದು ಸಂಜೆ 4:30 ಗಂಟೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx