ತುಮಕೂರು: ಸಿದ್ಧಾರ್ಥ ಸಮೂಹ ಸಂಸ್ಥೆಗಳಾದ ಮೆಡಿಕಲ್, ಇಂಜಿನಿಯರಿಂಗ್ ಮತ್ತು ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜು ಕ್ಯಾಂಪಸ್ ನಲ್ಲಿ 76ನೇ ಗಣರಾಜ್ಯೋತ್ಸವನ್ನು ಸರಳ ಮತ್ತುಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಸಮೀಪದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತುಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಗೃಹ ಸಚಿವರು ಹಾಗೂ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಜಿಪರಮೇಶ್ವರ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಸಾಹೇ ವಿವಿಯ ಕಾಲೇಜುಗಳ ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಪೀಠಿಕೆಯ ಪ್ರಮಾಣವಚನ ಭೋಧಿಸಿದರು.
ನಂತರ ಮಾತನಾಡಿದ ಅವರು,ಭಾರತದ ಸಂವಿಧಾನಜಾರಿಗೆ ಬಂದು ಇಂದಿಗೆ 76 ವರ್ಷಕಳೆದಿದ್ದು, ಸರ್ವರಿಗೂ ಸಮನಾದ ಹಕ್ಕು ಬಾಧ್ಯತೆಗಳನ್ನು ಕಲ್ಪಿಸಿರುವ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದೆ. ನಾವೆಲ್ಲರು ಸಂವಿಧಾನದಡಿಯಲ್ಲಿ ಜೀವನ ಸಾಗಿಸುತ್ತಿದ್ದು, ಅದರ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತುಅದರ ಮೂಲ ಉದ್ದೇಶಗಳನ್ನು ಅರಿತು ಮುನ್ನಡೆಯಬೇಕಿದೆ ಎಂದು ಕರೆ ನೀಡಿದರು.
ಆರ್ಥಿಕತೆ ಮತ್ತುತಾಂತ್ರಿಕ ಪ್ರಗತಿ ಸಾಧನೆಯಲ್ಲಿ ಭಾರತ ಪ್ರಪಂಚದಲ್ಲಿಯೇ 3ನೇ ಸ್ಥಾನ ಪಡೆದಿದೆ. ಮುಂದೆ ಇದೇ ರೀತಿ ಅಭಿವೃದ್ದಿ ಸಾಧಿಸಲು ಯುವ ಸಮದಾಯ ಕ್ರಿಯಾತ್ಮಕ ಕೆಲಸಗಳತ್ತ ಗಮನ ಹರಿಸಬೇಕಾಗಿದೆ ಎಂದು ಕರೆ ನೀಡಿ ಡಾ.ಜಿ.ಪರಮೇಶ್ವರ ಅವರು ಇಂದಿನ ದಿನಗಳಲ್ಲಿ ಶಿಕ್ಷಣ ಜೀವನದ ಬಹುಮುಖ್ಯ ಪಾತ್ರವಾಗಿದ್ದು, ಎಲ್ಲರೂ ಶಿಕ್ಷಣ ಪಡೆದು ಉತ್ತಮ ಜೀವನರೂಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಶಿಕ್ಷಣ, ಆರೋಗ್ಯ ನೀಡುವಲ್ಲಿ ತಮ್ಮ ಸಂಸ್ಥೆ ಕಾಳಜಿ ವಹಿಸುತ್ತಿದೆ ಎಂದರು.
ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವ ಡಾ.ಎಂ.ಝಡ್. ಕುರಿಯನ್, ಶ್ರೀಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಬಿ.ಸಾಣಿಕೊಪ್ಪ, ಉಪಪ್ರಾಂಶುಪಾಲರಾದ ಡಾ. ಪ್ರಭಾಕರ್, ದಂತವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರವೀಣ್ ಬಿ.ಕುಡುವ, ವೈದ್ಯಕೀಯಕಾಲೇಜಿನ ಅಧೀಕ್ಷಕರಾದ ಡಾ.ವೆಂಕಟೇಶ್ವರ್ ಹಾಗೂ ಸಾಹೇ ವಿವಿ ಮತ್ತು ವೈದ್ಯಕೀಯ ಮಹಾವಿದ್ಯಾನಿಲಯದ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಹಾಜರಿದ್ದರು.
ಇಂಜಿನಿಯರಿಂಗ್ ಕಾಲೇಜಿನಲ್ಲಿಗಣರಾಜ್ಯೋತ್ಸವ:
ತುಮಕೂರಿನ ಕುಣಿಗಲ್ ರಸ್ತೆಯಲ್ಲಿರುವ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್ಸಿನಲ್ಲಿ 76ನೇ ಗಣರಾಜ್ಯೋತ್ಸವನ್ನುಅರ್ಥಪೂರ್ಣವಾಗಿ ಆಚರಿಸಲಾಯಿತು. ಶಿಕ್ಷಣ ಶಿಲ್ಪಿ ಡಾ.ಎಚ್.ಎಂ.ಗಂಗಾಧರಯ್ಯ ವೃತ್ತದಲ್ಲಿಏರ್ಪಟ್ಟ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆಯನ್ನು ಹಾಡುವುದರ ಮೂಲಕ ಧ್ವಜಾರೋಣ ಮಾಡಲಾಯಿತು. ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶರವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ವ ನಮನ ಸಲ್ಲಿಸಿದರು.
ನಂತರ ಮಾತನಾಡಿದ ಡಾ.ಎಂ.ಎಸ್.ರವಿಪ್ರಕಾಶ,ಸಮಾಜಕ್ಕೆ ಮತ್ತು ದೇಶಕ್ಕೆ ಋಣಸಂದಾಯ ಮಾಡುವುದರ ಮೂಲಕ ದೇಶ ಸೇವೆ ಮಾಡುತ್ತಿದ್ದೇವೆ ಎಂಬ ಭಾವನೆಯನ್ನುಎಲ್ಲರೂ ಬೆಳೆಸಿಕೊಳ್ಳಬೇಕು. ಸಿಪಾಯಿ ದಂಗೆ ಮೂಲಕ ಗಳಿಸಿದ ಸ್ವಾತಂತ್ರ್ಯ ಮತ್ತುಗಣರಾಜ್ಯದಿಂದ ದೊರೆತ ಅವಕಾಶಗಳನ್ನು ಸದುಪಯೋಗ ಪಡೆದುಕೊಳ್ಳುತ್ತಿದ್ದೇವೆ. ಸಹಸ್ರಾರು ದೇಶಭಕ್ತರ ಬಲಿದಾನವನ್ನುಸದಾ ಸ್ಮರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಡೀನ್ ಡಾ.ರೇಣುಕಾ ಲತಾ, ಬಿಬಿಎಂ ಪ್ರಾಂಶುಪಾಲರಾದ ಡಾ. ಮಮತಾ, ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಬಿ.ಟಿ.ಮುದ್ದೇಶ್, ಎನ್ ಸಿಸಿ ಅಧಿಕಾರಿ ಡಾ.ಜಯಪ್ರಕಾಶ್ , ಎನ್ ಎಸ್ ಎಸ್ ಅಧಿಕಾರಿ ಡಾ.ರವಿಕಿರಣ್, ವಿವಿಧ ವಿಭಾಗದ ಮುಖ್ಯಸ್ಥರು, ಎನ್.ಸಿ.ಸಿ. ಕ್ರೇಡಿಟ್ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಿದ್ದಾರ್ಥ ಪದವಿ ಕಾಲೇಜಿನಲ್ಲಿ ಧ್ವಜಾರೋಹಣ:
ತುಮಕೂರಿನ ಸರಸ್ವತಿಪುರಂನಲ್ಲಿರುವ ಶ್ರೀ ಸಿದ್ಧಾರ್ಥ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾದ ಡಾ. ಪಿ. ಹೇಮಲತಾ ಧ್ವಜಾರೋಹಣ ನೆರವೇರಿಸಿದರು. ಶ್ರೀ ಸಿದ್ಧಾರ್ಥ ಪಿಯು ಕಾಲೇಜಿನ ಪ್ರಾಂಶುಪಾಲರದ ಭಾನುಪ್ರಕಾಶ್, ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ರಮೇಶ್ ಮಣ್ಣೇ ಹಾಗೂ ಎಲ್ಲಾ ವಿಭಾಗದ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು. ಎನ್ ಸಿಸಿ ಕೆಡೆಟ್ಸ್ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಗೊಲ್ಲಹಳ್ಳಿಯಲ್ಲಿ ಧ್ವಜಾರೋಹಣ:
76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ತುಮಕೂರಿನ ಗೊಲ್ಲಹಳ್ಳಿಯಲ್ಲಿ ದಿವಂಗತ ಡಾ.ಹೆಚ್.ಎಂ.ಗಂಗಾಧರಯ್ಯ ಹಾಗೂ ತಾಯಿ ಗಂಗಮಾಳಮ್ಮ, ಸಹೋದರ ಡಾ.ಜಿ.ಶಿವಪ್ರಸಾದ್ ರವರ ಗದ್ದುಗೆಗಳಿಗೆ ಗೃಹ ಸಚಿವರು ಹಾಗೂ ಸಿದ್ದಾರ್ಥ್ ಸಂಸ್ಥೆಯ ಕಾರ್ಯದರ್ಶಿಗಳು ಆದ ಡಾ.ಜಿ.ಪರಮೇಶ್ವರ ಅವರು ಪೂಜೆ ಸಲ್ಲಿಸಿದರು. ಬಳಿಕ ಶ್ರೀ ಸಿದ್ಧಾರ್ಥ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಧ್ವಜಾರೋಹಣಾ ನೆರವೇರಿಸಿ, ದೇಶ ಸನೇಕ ಸಮಸ್ಯೆಗಳನ್ನು ಎದುರಿಸುತಿದ್ದು, ಅದಕ್ಕೆ ಡಾ.ಅಂಬೇಡ್ಕರ್ ರೂಪಿಸಿರುವ ಸಂವಿಧಾನದಲ್ಲಿ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಬಿ. ನಂಜುಂಡಪ್ಪ, ಶಿಕ್ಷಣಾಧಿಕಾರಿಗಳಾದ ಸಿ.ಎಚ್.ತಿಪ್ಪೇಸ್ವಾಮಿ, ಎನ್.ದೇವರಾಜು ಸಮನ್ವಯಾಧಿಕಾರಿಗಳಾದ ಬಿ.ಎನ್.ದಯಾನಂದ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸಿ ಟಿ ಆರ್ ವೇದಮೂರ್ತಿ, ಡಿಇಎಲ್ ಇಡಿಕಾಲೇಜಿನ ಪ್ರಾಂಶುಪಾಲರಾದ ಡಿ.ಈಶ್ವರಪ್ಪನವರು ಹಾಗೂ ಶಾಲಾ—ಕಾಲೇಜಿನ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4