nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026
    Facebook Twitter Instagram
    ಟ್ರೆಂಡಿಂಗ್
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    • ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
    • ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ
    ತುಮಕೂರು January 26, 2026

    ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ

    By adminJanuary 26, 2026No Comments2 Mins Read
    tumakuru

    ತುಮಕೂರು: ಜಿಲ್ಲಾಡಳಿತದ ವತಿಯಿಂದ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಮತ್ತು ಶಿಸ್ತುಬದ್ಧವಾಗಿ ಆಚರಿಸಲಾಯಿತು.

    ಧ್ವಜಾರೋಹಣ: ರಾಜ್ಯದ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ್ ಅವರು ರಾಷ್ಟ್ರಧ್ವಜವನ್ನು ಹಾರಿಸಿ, ಗೌರವ ವಂದನೆ ಸ್ವೀಕರಿಸಿದರು. ಇದೇ ವೇಳೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಗಳಿಗೆ ಪುಷ್ಪನಮನದ ಮೂಲಕ ಗೌರವ ಸಲ್ಲಿಸಿ, ಅವರ ಅವಿಸ್ಮರಣೀಯ ಕೊಡುಗೆಯನ್ನು ಸ್ಮರಿಸಿದರು.


    Provided by
    Provided by

    ಪಥಸಂಚಲನದ ವೈಖರಿ: ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ, ನಾಗರಿಕ ಪೊಲೀಸ್ ತಂಡ, ಗೃಹರಕ್ಷಕ ದಳ, ಅರಣ್ಯ ರಕ್ಷಕ ಪಡೆ ಹಾಗೂ ಎನ್.ಸಿ.ಸಿ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಪಥಸಂಚಲನದ ನೇತೃತ್ವವನ್ನು ಪ್ರೊಬೇಷನರಿ ಐಪಿಎಸ್ ಅಧಿಕಾರಿ ಶ್ರೀ ರಾಣು ಗುಪ್ತ ಅವರು ವಹಿಸಿದ್ದರು.

    ವಿಶೇಷ ಆಕರ್ಷಣೆ: ತುಮಕೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶೇಷ ಚೇತನರ ತಂಡ ಕವಾಯತಿನಲ್ಲಿ ಭಾಗವಹಿಸಿ ಗಮನ ಸೆಳೆಯಿತು. ಈ ತಂಡವು ವೇದಿಕೆಯ ಮುಂಭಾಗದಲ್ಲಿ ಸಾಗುವಾಗ ಪ್ರೇಕ್ಷಕರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಗೌರವ ಸಲ್ಲಿಸಿದರು.

    ಸಾಂಸ್ಕೃತಿಕ ಕಳೆ: ಹನುಮಂತಪುರ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಂದ ದೇಶಭಕ್ತಿ ಗೀತೆಗಳ ಗಾಯನ ಮತ್ತು ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರದರ್ಶನಗಳು ಕ್ರೀಡಾಂಗಣದ ಕಳೆಯನ್ನು ಹೆಚ್ಚಿಸಿದವು.

    ಗೌರವ ವಂದನೆ: ಮಾಜಿ ಸೈನಿಕರ ತಂಡ ಮತ್ತು ವಿವಿಧ ಶಾಲಾ ಕಾಲೇಜುಗಳ ಎನ್.ಸಿ.ಸಿ ತಂಡಗಳು ಶಿಸ್ತುಬದ್ಧವಾಗಿ ಪಥಸಂಚಲನ ನಡೆಸಿ ರಾಷ್ಟ್ರಧ್ವಜಕ್ಕೆ ಗೌರವ ಸಮರ್ಪಿಸಿದವು.

    ಗೃಹ ಸಚಿವ ಪರಮೇಶ್ವರ್ ಅವರು ತೆರೆದ ವಾಹನದಲ್ಲಿ ಸಾಗಿ ವಿವಿಧ ತುಕಡಿಗಳ ಪರಿವೀಕ್ಷಣೆ ನಡೆಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ ಗೌಡ, ವಿಧಾನ ಪರಿಷತ್ ಸದಸ್ಯರಾದ ಆರ್.ರಾಜೇಂದ್ರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್, ಬಿಎಂಟಿಸಿ ಉಪಾಧ್ಯಕ್ಷರಾದ ನಿಕೇತ್ ರಾಜ್ ಮೌರ್ಯ ಮುಂತಾದವರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ಮಂಡ್ಯ: ಮಳವಳ್ಳಿಯ ಜೆಡಿಎಸ್ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪವೊಂದು ಕೇಳಿಬಂದಿದೆ.…

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.